ಬೆಂಗಳೂರು: ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾರತ್ ಹಳ್ಳಿ ಪೊಲೀಸರು ಅತುಲ್ ಅತ್ತೆ ನಿಶಾ ಸಿಂಘನಿಯಾ ಹಾಗೂ ಬಾಮೈದ ಅನುರಾಗ್ ಸಿಂಘಾನಿಯಾನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಉತ್ತರ ಪ್ರದೇಶದ ಜೌನ್ಪುರ ಪೊಲೀಸ್ ಠಾಣೆಗೆ ಕರೆದೊಯ್ದು ಪ್ರಾಥಮಿಕ ವಿಚಾರಣೆ ನಡೆಸಲಾಗಿದೆ. ಅತುಲ್ ಪತ್ನಿ ನಿಖಿತಾ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಇಬ್ಬರನ್ನು ನಾಳೆ ಕೋರ್ಟ್ ಅನುಮತಿ ಪಡೆದು ಬೆಂಗಳೂರಿಗೆ ಪೊಲೀಸರು ಕರೆತರಲಿದ್ದಾರೆ.