ದೀಪ ಬೆಳಗುವ ಮೂಲಕ ಅಕ್ಷರ ಜಾತ್ರೆಗೆ ಸಿಎಂ ಚಾಲನೆ

Public TV
1 Min Read
Mandya Sahitya Sammelan

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Literary Conference) ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ (Siddaramaiah)  ಚಾಲನೆ ನೀಡಿದರು.

ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು. ಹೊಂಬಾಳೆ ಅರಳಿಸಿ ಕನ್ನಡ ನುಡಿ ಅರಳಲಿ ಎಂಬ ಆಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಇದನ್ನೂ ಓದಿ: ರಾಮಮಂದಿರ ಕಟ್ಟೋದ್ರಿಂದ ಹಿಂದೂ ನಾಯಕನಾಗಲು ಸಾಧ್ಯವಿಲ್ಲ: ಮೋಹನ್‌ ಭಾಗವತ್‌

Mandya 87th Kannada Sahitya Sammelana

ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು. ಇದನ್ನೂ ಓದಿ: ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವ್ದೇ ನಿರ್ಧಾರಕ್ಕೆ ಬರೋದು ತಪ್ಪು: ಬೊಮ್ಮಾಯಿ

ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಳಗಾವಿ ಕೋರ್ಟ್ ಹಾಲ್‌ನಲ್ಲಿ ಕಣ್ಣೀರಿಟ್ಟ ಸಿ.ಟಿ ರವಿ – ಜಾಮೀನಿಗೆ ವಕೀಲರ ಮನವಿ, ಆದೇಶ ಕಾಯ್ದಿರಿಸಿದ ಕೊರ್ಟ್

Share This Article