ತುಮಕೂರು: ಬೆಂಗಳೂರು- ಪುಣೆ ದಶಪಥ ರಾಷ್ಟ್ರೀಯ ಹೆದ್ದಾರಿ (Bengaluru-Pune Expressway) (ವಿಷನ್-47) ಕಾಮಗಾರಿ ಅತಿ ಶೀಘ್ರ ಪ್ರಾರಂಭವಾಗಲಿದ್ದು, ಇದರಿಂದಾಗಿ ಶಿರಾ ತಾಲೂಕಿನ ಚಿತ್ರಣವೇ ಬದಲಾಗುವುದು ಎಂದು ಶಾಸಕ ಟಿ.ಬಿ.ಜಯಚಂದ್ರ (TB Jayachandra) ಹೇಳಿದರು.
ಶಿರಾ (Sira) ತಾಲೂಕಿನ ತೊಗರಗುಂಟೆ ಬಳಿ 25 ಕೋಟಿ ರೂ. ವೆಚ್ಚದಲ್ಲಿ ಶಿರಾ-ಅಮರಾಪುರ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನಲ್ಲಿ ಈಗಾಗಲೇ ಮೂರು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುತ್ತಿದ್ದು, ಶೀಘ್ರದಲ್ಲಿ ಬೆಂಗಳೂರು- ಪುಣೆ ಹೆದ್ದಾರಿ ಕಾಮಗಾರಿ ಪ್ರಾರಂಭವಾಗುವುದರಿಂದ ಒಟ್ಟು ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುವುದರಿಂದ ಮುಂದಿನ ದಿನಗಳಲ್ಲಿ ತಾಲೂಕು ಅಭಿವೃದ್ಧಿಯತ್ತ ಸಾಗುವುದು ಎಂದರು. ಇದನ್ನೂ ಓದಿ: ತ್ರಾಸಿ ಬೀಚ್‌ನಲ್ಲಿ ಟೂರಿಸ್ಟ್ ಬೋಟ್ ಪಲ್ಟಿ – ರೈಡರ್ ಕಣ್ಮರೆ
ಶಿರಾ- ಅಮರಾಪುರ ರಸ್ತೆ ಕಾಮಗಾರಿ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿದೆ. ರಸ್ತೆ ಗುಣಮಟ್ಟಕ್ಕೆ ಆದ್ಯತೆ ನೀಡಿ ಹಣದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಹೆಚ್ಚು ಹಣ ಬೇಕಾದರೆ ನನಗೆ ಹೇಳಿ ಕೊಡಿಸಲಾಗುವುದು. ತಾಲೂಕಿನಲ್ಲಿ ನಾಲ್ಕು ಹೆದ್ದಾರಿಗಳು ಹಾದು ಹೋಗುತ್ತಿದ್ದು, ಇದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: Maharashtra | ನೂತನ ಸಚಿವರಿಗೆ ಖಾತೆ ಹಂಚಿಕೆ, ಗೃಹಖಾತೆ ತನ್ನಲ್ಲೇ ಉಳಿಸಿಕೊಂಡ ಬಿಜೆಪಿ – ಇಲ್ಲಿದೆ ಕಂಪ್ಲೀಟ್ ಲಿಸ್ಟ್!