– ಸಿಸಿ ಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು: ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಗುಂಪು ಗುಂಪಾಗಿ ಬೀದಿ ನಾಯಿಗಳು (Stray Dogs Attack) ದಾಳಿ ಮಾಡಿದ ಘಟನೆ ಬೆಂಗಳೂರಿನ (Bengaluru) ಕೆಆರ್ ಪುರಂನ (KR Puram) ಸೊನ್ನೆನಹಳ್ಳಿಯಲ್ಲಿ ನಡೆದಿದೆ.
ನಾಯಿಗಳು ಅಟ್ಯಾಕ್ ಮಾಡುತ್ತಿದ್ದಂತೆ ತಪ್ಪಿಸಿಕೊಳ್ಳುವ ಸಲುವಾಗಿ ಬಾಲಕ ಓಡಿದ್ದಾನೆ. ಬಾಲಕ ಓಡುತ್ತಿದ್ದಂತೆ ಶ್ವಾನಗಳು ಆತನನ್ನು ಅಟ್ಟಾಡಿಸಿವೆ. ಈ ವೇಳೆ ತಪ್ಪಿಸಿಕೊಳ್ಳುವಾಗ ಬಾಲಕ ನೆಲದ ಮೇಲೆ ಬಿದ್ದಿದ್ದಾನೆ. ಈ ಸಂದರ್ಭ ನಾಯಿಗಳು ಬಾಲಕನ ಮೇಲೆ ಎರಗಿವೆ. ಇದನ್ನೂ ಓದಿ: ಹಣಕಾಸಿನ ವಂಚನೆ ತಡೆಗೆ ಆರ್‌ಬಿಐ ಅಭಿವೃದ್ಧಿಪಡಿಸಲಿದೆ AI ತಂತ್ರಜ್ಞಾನ! ಇದು ಹೇಗೆ ಕಾರ್ಯನಿರ್ವಹಿಸುತ್ತದೆ?
ನಾಯಿಗಳು ತನ್ನ ಮೇಲೆ ಎರಗುತ್ತಿದ್ದಂತೆ ಕೂಡಲೇ ಬಾಲಕ ಕಿರುಚಿಕೊಂಡಿದ್ದು, ಕಿರುಚಾಟ ಕೇಳಿ ಸ್ಥಳೀಯರು ಆಗಮಿಸಿದ್ದಾರೆ. ಸ್ಥಳೀಯರು ಬಂದು ನಾಯಿಗಳನ್ನು ಓಡಿಸಿದ ಹಿನ್ನೆಲೆ ಭಾರೀ ಅನಾಹುತ ತಪ್ಪಿದೆ. ಬಾಲಕನ ಮೇಲೆ ಶ್ವಾನಗಳು ದಾಳಿ ನಡೆಸಿದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: 12 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಮಹಾ ಕುಂಭಮೇಳ – ಸಿದ್ಧತೆ ಹೇಗಿದೆ? ವಿಶೇಷತೆಗಳೇನು?