Pune | ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್ – ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ

Public TV
1 Min Read
Pune Truck Accident

– 6 ಮಂದಿಗೆ ಗಾಯ, ಟ್ರಕ್ ಚಾಲಕ ಅರೆಸ್ಟ್

ಪುಣೆ: ಕುಡಿದ ಮತ್ತಿನಲ್ಲಿ ಚಾಲಕ ಫುಟ್‌ಪಾತ್‌ನಲ್ಲಿ (Footpath) ಮಲಗಿದ್ದವರ ಮೇಲೆ ಟ್ರಕ್ (Truck) ಹರಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪುಣೆಯಲ್ಲಿ (Pune) ಭಾನುವಾರ ತಡರಾತ್ರಿ ನಡೆದಿದೆ.

ವಾಘೋಲಿಯಲ್ಲಿ ತಡರಾತ್ರಿ 12:30ರ ಸುಮಾರಿಗೆ ಟ್ರಕ್ ಚಾಲಕ ಫುಟ್‌ಪಾತ್‌ನಲ್ಲಿ ಮಲಗಿದ್ದ 9 ಕಾರ್ಮಿಕರ ಮೇಲೆ ಟ್ರಕ್ ಹರಿಸಿದ್ದಾನೆ. ಘಟನೆಯ ಪರಿಣಾಮ ಮೂವರು ಮೃತಪಟ್ಟಿದ್ದು, 6 ಮಂದಿ ಗಂಭಿರ ಗಾಯಗೊಂಡಿದ್ದಾರೆ. ಮೃತರನ್ನು ವೈಭವಿ ಪವಾರ್ (1), ವೈಭವ್ ಪವಾರ್ (2) ಮತ್ತು ವಿಶಾಲ್ ಪವಾರ್ (22) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಾಸೂನ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಾಸೂನ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: Uttar Pradesh | ಖಾಲಿಸ್ತಾನ್‌ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್‌

ಮೃತರು ಹಾಗೂ ಗಾಯಾಳುಗಳೆಲ್ಲರೂ ಅಮರಾವತಿ ನಿವಾಸಿಗಳಾಗಿದ್ದು, ಕಟ್ಟಡ ನಿರ್ಮಾಣ ಕೆಲಸಕ್ಕಾಗಿ ಪುಣೆಗೆ ಬಂದಿದ್ದರು. ಘಟನಾ ಸ್ಥಳಕ್ಕೆ ಎಸಿಪಿ ಖಾಡೆ, ಎಸಿಪಿ ಸೋನವಾನೆ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಇನ್ನು ಪಾನಮತ್ತನಾಗಿ ಟ್ರಕ್ ಚಲಾಯಿಸಿದ ಚಾಲಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ನಿರ್ದಾಕ್ಷಿಣ್ಯ ನರಹತ್ಯೆ ಪ್ರಕರಣ ದಾಖಲಿಸಲಾಗಿದೆ. ಪಿಐ ವಾಪೋನಿ ಪಂಡಿತ್ ರೆಜಿತ್ವಾಡ್ ನೇತೃತ್ವದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಹೊರರಾಜ್ಯದ ಯುವತಿಯರನ್ನ ಕರೆಸಿ ಬೆಂಗ್ಳೂರಲ್ಲಿ ಹೈಟೆಕ್ ವೇಶ್ಯವಾಟಿಕೆ ದಂಧೆ – ಆರೋಪಿ ಅಂದರ್‌

Share This Article