BBK 11: ವರಸೆ ಬದಲಿಸಿದ ಸ್ಪರ್ಧಿ: ಐಶ್ವರ್ಯಾ ಮುಖಕ್ಕೆ ಟೀ ಚೆಲ್ಲಿದ ಭವ್ಯಾ

Public TV
1 Min Read
bhavya

‘ಬಿಗ್‌ ಬಾಸ್‌ ಕನ್ನಡ 11’ರ (Bigg Boss Kannada 11)  ಆಟ 90ನೇ ದಿನದತ್ತ ಮುನ್ನುಗ್ಗುತ್ತಿದೆ. ದೊಡ್ಮನೆಯಾಟ ಕೊನೆ ಹಂತಕ್ಕೆ ಬರುವುದರಿಂದ ಸ್ಪರ್ಧಿಗಳಲ್ಲಿ ಪೈಪೋಟಿ ಹೆಚ್ಚಾಗಿ ನಡೆದಿದೆ. ಇನ್ನೂ ಭಾನುವಾರ ಸಂಚಿಕೆಯಲ್ಲಿ ಸುದೀಪ್‌ ಅವರಿಂದ ಭವ್ಯಾ ಕಿಚ್ಚ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಐಶ್ವರ್ಯಾ (Aishwarya) ಮುಖಕ್ಕೆ ಭವ್ಯಾ (Bhavya Gowda) ಟೀ ಚೆಲ್ಲಿದ್ದಾರೆ. ಇದನ್ನೂ ಓದಿ:ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಕಿಚ್ಚ

bigg boss 3

ಬಿಗ್ ಬಾಸ್ ಮನೆಯಲ್ಲಿ ಎಚ್ಚೆತ್ತಿಕೊಳ್ಳಿ ಎಂದು ಟಾಸ್ಕ್ ಶುರುವಾಗಿದ್ದು, ಸ್ಪರ್ಧಿಗಳ ಮುಖಕ್ಕೆ ಟೀ ಅನ್ನು ಹಾಕಲಾಗಿದೆ. ಇದರಲ್ಲಿ ಕೇವಲ ಐಶ್ವರ್ಯ ಮುಖಕ್ಕೆ ಭವ್ಯಾ ಮಾತ್ರ ಟೀ ಚೆಲ್ಲಿಲ್ಲ. ಇದೇ ರೀತಿ ಎಚ್ಚೆತ್ತುಕೊಳ್ಳಿ ಎಂದು ಹನುಮಂತು ಮುಖಕ್ಕೆ ಧನರಾಜ್, ಗೌತಮಿ ಮುಖಕ್ಕೆ ರಜತ್, ಚೈತ್ರಾ ಮುಖಕ್ಕೆ ಮಂಜು, ಮಂಜು ಮುಖಕ್ಕೆ ಗೌತಮಿ, ಮೋಕ್ಷಿತಾ ಮುಖಕ್ಕೂ ಚಹಾ ಚೆಲ್ಲಲಾಗಿದೆ. ಅಂದರೆ ಇವರೆಲ್ಲಾ ಮನೆಯಲ್ಲಿ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಲಾಗಿದೆ.

aishwarya

ಬಿಗ್‌ ಬಾಸ್‌ ಅಣತಿಯಂತೆ ಮನೆಯಲ್ಲಿ ಸದಸ್ಯರ ಪೈಕಿ ಎಚ್ಚೆತ್ತುಕೊಳ್ಳಬೇಕಿರುವ ಸದಸ್ಯ ಯಾರು ಎಂದು ಘೋಷಿಸಬೇಕಿದೆ.  ಈ ಹಿನ್ನೆಲೆಯಲ್ಲಿ ಗೌತಮಿ, ಹನುಮಂತು, ಚೈತ್ರಾ, ಮೋಕ್ಷಿತಾ, ಮಂಜು ಇವರು ಇನ್ನಷ್ಟು ಎಚ್ಚೆತ್ತುಕೊಂಡು ಸ್ಪರ್ಧೆ ಮಾಡಬೇಕಿದೆ. ನೀವು ಟಾಸ್ಕ್‌ನಲ್ಲಿ ಇನ್ನಷ್ಟು ಸುಧಾರಿಸಿಕೊಳ್ಳಬೇಕು ಎಂದು ಟೀ ಚೆಲ್ಲಲಾಗಿದೆ. ಗೌತಮಿಗೆ ಹೆದರಿಕೊಂಡು ಮಂಜು ಮಾತನಾಡಲ್ಲ ಎಂಬ ಆರೋಪಕ್ಕೆ ಸ್ನೇಹಿತನ ಮೇಲೆ ಟೀ ಎರಚಿ ಎಚ್ಚೆತ್ತುಕೊಳ್ಳಿ ಎಂದು ವಾರ್ನಿಂಗ್‌ ಕೊಟ್ಟಿದ್ದಾರೆ.

ಚೈತ್ರಾ ಕುಂದಾಪುರ ಹಾಗೂ ಐಶ್ವರ್ಯಾ ನಡುವೆ ಮಾತಿನ ಸಮರ ನಡೆದಿದೆ. ನಿಮ್ಮ ಆಟಗಳಿಗೆ ಈ ವಾರ ನಾನು ಬಲಿಪಶು ಆದೆ ಎಂದು ಚೈತ್ರಾಗೆ ಐಶ್ವರ್ಯಾ ಗುಡುಗಿದ್ದಾರೆ. ಇಬ್ಬರ ನಡುವೆ ಸೇಡಿನ ಕಿಡಿ ಹತ್ತಿಕೊಂಡಿದೆ. ನೀನು ಯಾವಳೇ ಎ.. ಅನ್ನೋಕೆ ಎಂದು ಚೈತ್ರಾ ಏಕವಚನದಲ್ಲೇ ಮಾತನಾಡಿದ್ದಾರೆ. ಬಾಯಿ ಮುಚ್ಚೆ ಸಾಕು ಎಂದು ಐಶ್ವರ್ಯಾ ವಿರುದ್ಧ ರಾಂಗ್‌ ಆಗಿದ್ದಾರೆ ಫೈರ್‌ ಬ್ರ್ಯಾಂಡ್‌ ಚೈತ್ರಾ.

Share This Article