Chitradurga| ಮಲಗುಂಡಿಗಿಳಿದ ಕಾರ್ಮಿಕ ಉಸಿರುಗಟ್ಟಿ ಸಾವು

Public TV
1 Min Read
Chitradurga Septic Tank Labor Death

– ಕಲ್ಯಾಣ ಮಂಟಪದ ಮಾಲೀಕನ ವಿರುದ್ಧ ದೂರು

ಚಿತ್ರದುರ್ಗ: ಮಲದ ಗುಂಡಿಗಿಳಿದ (Septic Tank) ಕಾರ್ಮಿಕನೋರ್ವ (Labor) ಉಸಿರುಗಟ್ಟಿ ಸಾವನ್ನಪ್ಪಿರುವ ಅಮಾನವೀಯ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ (Challakere) ಪಟ್ಟಣದಲ್ಲಿ ನಡೆದಿದೆ.

ಚಳ್ಳಕೆರೆ ಪಟ್ಟಣದಲ್ಲಿ ಡಿ.18ರಂದು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಳ್ಳಕೆರೆಯ ಗಾಂಧಿನಗರ ಬಡಾವಣೆಯ ರಂಗಸ್ವಾಮಿ (48) ಮೃತ ಕಾರ್ಮಿಕನೆಂದು ಗುರುತಿಸಲಾಗಿದೆ. ಇದನ್ನೂ ಓದಿ: ಬಳ್ಳಾರಿ| ಆಕಸ್ಮಿಕ ಬೆಂಕಿಗೆ ಮೂರು ಅಂಗಡಿಗಳು ಭಸ್ಮ

ಈ ಸಂಬಂಧ ಡಿ.23ರ ರಾತ್ರಿ ಚಳ್ಳಕೆರೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ನೀರಿನ ತೊಟ್ಟಿಯಲ್ಲಿ ಮುಳುಗಿ ಕಾರ್ಮಿಕ ಸಾವೆಂದು ತಿಳಿಸಲಾಗಿತ್ತು. ಈ ವೇಳೆ ಸಫಾಯಿ ಕರ್ಮಚಾರಿಗಳ ಸೇವಾ ಸಮಿತಿಯಿಂದ ಡಿಸಿ ಕಚೇರಿಗೆ ದೂರು ಸಲ್ಲಿಸಿ, ತನಿಖೆಗೆ ಆಗ್ರಹಿಸಿದ ಪರಿಣಾಮ ನಗರಸಭೆ ಕಂದಾಯ ನಿರೀಕ್ಷಕ ಗುರುಪ್ರಸಾದ್ ಸ್ಥಳ ಪರಿಶೀಲನೆ ನಡೆಸಿದ ವೇಳೆ ಈ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: Hand Luggage On Flights | ಇನ್ಮುಂದೆ 7 ಕೆಜಿ ಮೀರದ ಕೇವಲ 1 ಬ್ಯಾಗ್‌ಗೆ ಮಾತ್ರ ಅನುಮತಿ

ಕಲ್ಯಾಣ ಮಂಟಪದ ಮಾಲೀಕ ಗುರುವೀರ ನಾಯಕ್ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಗೆ ನಗರಸಭೆ ಅಧಿಕಾರಿ ದೂರು ಸಲ್ಲಿಸಿದ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ತನಿಖೆ ಚುರುಕಾಗಿದೆ. ಇದನ್ನೂ ಓದಿ: ಕೋಲಾರದ ರಾಜಕೀಯ ವ್ಯಕ್ತಿಯಿಂದ ಥಾರ್‌ ಗಿಫ್ಟ್‌ – ʼಮೈಸೂರ್‌ಪಾಕ್‌ʼ ಖೆಡ್ಡಾಕ್ಕೆ ಕೆಡವಲು ಶ್ವೇತಾ ಪ್ಲ್ಯಾನ್‌!

Share This Article