ಬೆಂಗಳೂರು: ಇನ್ಮುಂದೆ ಗ್ರಾಹಕರಿಗೆ ‘ನಂದಿನಿ’ ಹಾಲಷ್ಟೇ ಅಲ್ಲ, ‘ನಂದಿನಿ ಇಡ್ಲಿ ಮತ್ತು ದೋಸೆ’ (Nandini Idli, Dosa Batter) ಹಿಟ್ಟು ಕೂಡ ಸಿಗಲಿದೆ. ನಂದಿನಿ ಇಡ್ಲಿ, ದೋಸೆ ಹಿಟ್ಟನ್ನು ಸಿಎಂ ಸಿದ್ದರಾಮಯ್ಯ (Siddaramaiah) ಬುಧವಾರ ಬಿಡುಗಡೆ ಮಾಡಿದರು.
ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ನಂದಿನಿ’ ವತಿಯಿಂದ ಪ್ರಥಮ ಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ ಪ್ರೊಟೀನ್‌ಯುಕ್ತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: ಎರಡು ತಿಂಗಳಲ್ಲಿ ಶಿವಮೊಗ್ಗ ಏರ್‌ಪೋರ್ಟ್‌ನಿಂದ ಕಾರ್ಗೋ ವಿಮಾನಗಳ ಹಾರಾಟ : ಬಿ.ವೈ ರಾಘವೇಂದ್ರ
ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳ ಪ್ರಮುಖ ನಗರಗಳಲ್ಲೂ ನಂದಿನಿ ಹಾಲಿಗೆ ಬೇಡಿಕೆ ಬರುತ್ತಿದೆ. ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯ ಸುಪ್ರಸಿದ್ಧ… pic.twitter.com/aG6IkAiUjR
— CM of Karnataka (@CMofKarnataka) December 25, 2024
ಸಚಿವರಾದ ವೆಂಕಟೇಶ್, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಕೆಎಂಎಫ್ ಬಿಡುಗಡೆ ಮಾಡಿರುವ ಇಡ್ಲಿ ಮತ್ತು ದೋಸೆ ಹಿಟ್ಟಿನಲ್ಲಿ 5% ರಷ್ಟು ಪ್ರೊಟೀನ್ ಅಂಶವನ್ನು ಮಿಶ್ರಣ ಮಾಡಲಾಗಿದೆ. 450 ಗ್ರಾಂ ತೂಕದ ಪ್ಯಾಕೆಟ್‌ಗೆ 40 ರೂ. ಹಾಗೂ 900 ಗ್ರಾಂ ತೂಕದ ಪ್ಯಾಕೆಟ್‌ಗೆ 80 ರೂ. ದರ ನಿಗದಿಪಡಿಸಲಾಗಿದೆ.
ಬೆಂಗಳೂರು ನಗರದಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನು ಪ್ಯಾಕೆಟ್‌ಗಳಲ್ಲಿ ಪ್ರಯೋಗಿಕವಾಗಿ ಮಾರಾಟ ಮಾಡಲಾಗುತ್ತಿದೆ. ಇದನ್ನೂ ಓದಿ: ವಾಜಪೇಯಿ ಜನ್ಮದಿನಕ್ಕೆ ಮೋದಿ ಗಿಫ್ಟ್ – ದೇಶದ ಮೊದಲ ನದಿ ಜೋಡಣೆ ಯೋಜನೆಗೆ ಶಿಲಾನ್ಯಾಸ