Hubballi| ಸಿಲಿಂಡರ್ ಬ್ಲಾಸ್ಟ್ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

Public TV
1 Min Read
Hubballi Ayya Devotees Death Cylinder Blast

ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು (Cylinder Blast) 9 ಅಯ್ಯಪ್ಪ ಮಾಲಾಧಾರಿಗಳು (Ayyappa Devotees) ತೀವ್ರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ.

ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಮೃತ ಅಯ್ಯಪ್ಪ ಮಾಲಾಧಾರಿಗಳು. ಹುಬ್ಬಳ್ಳಿಯ (Hubballi) ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 9 ಮಾಲಾಧಾರಿಗಳ ಪೈಕಿ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ – ಅಂತಿಮ ನಮನ ಸಲ್ಲಿಸಿದ ಚೌಟ, ಕೋಟ

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಮೃತರ ಕುಟುಂಬಸ್ಥರು ಮತ್ತು ಅಯ್ಯಪ್ಪ ಮಾಲಾಧಾರಿಗಳು ಸೇರಿದ್ದು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮನೆ ಮಕ್ಕಳನ್ನ ಕಳೆದುಕೊಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ದೇಶ ಸೇವೆ ಕನಸು ಹೊತ್ತು ಸೇನೆಗೆ ಸೇರ್ಪಡೆ – 7 ವರ್ಷಗಳ ಸೇವೆ ವೀರ ಮರಣದಲ್ಲಿ ಅಂತ್ಯ

Share This Article