ಬಿಗ್ ಬಾಸ್ ಮನೆಯ 11ರ (Bigg Boss Kannada 11) ಆಟ ಇನ್ನೇನು ಕೆಲವೇ ದಿನಗಳಲ್ಲಿ ಅಂತ್ಯವಾಗಲಿದೆ. ಹೀಗಿರುವಾಗ ದೊಡ್ಮನೆಯಲ್ಲಿ ಫ್ಯಾಮಿಲಿ ರೌಂಡ್ ಶುರುವಾಗಿದೆ. ಮನೆಯಲ್ಲಿರುವ ಸ್ಪರ್ಧಿಗಳ ಕುಟುಂಬಸ್ಥರು ಬಿಗ್ ಬಾಸ್‌ಗೆ ಎಂಟ್ರಿ ಕೊಡ್ತಿದ್ದಾರೆ. ಇದೀಗ ಗೌತಮಿ (Gouthami) ಪತಿ ಅಭಿಷೇಕ್ (Abhishek Kasaragod) ಆಗಮಿಸಿದ್ದಾರೆ. ತಮ್ಮ ಮದುವೆ ಆ್ಯನಿವರ್ಸರಿಯನ್ನು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ನಿನ್ನೆ (ಡಿ.31) ಭವ್ಯಾ, ತ್ರಿವಿಕ್ರಮ್ ಹಾಗೂ ರಜತ್ ಕುಟುಂಬ ಆಗಮಿಸಿತ್ತು. ಇಂದು ಮೋಕ್ಷಿತಾ, ಮಂಜು ಹಾಗೂ ಗೌತಮಿ ಕುಟುಂಬ ಆಗಮಿಸಿದೆ. ಮನೆಗೆ ಎಂಟ್ರಿ ಕೊಡುವಾಗಲೇ ಅಭಿಷೇಕ್ ಕೇಕ್ ಹಿಡಿದು ಬಂದರು. ಪತಿಯನ್ನು ನೋಡುತ್ತಿದ್ದಂತೆ ಗೌತಮಿ ಭಾವುಕರಾಗಿದ್ದಾರೆ. ಇದನ್ನೂ ಓದಿ:BBK 11: ತ್ರಿವಿಕ್ರಮ್‌ನಿಂದ ದೂರವಿರಲು ಪರೋಕ್ಷವಾಗಿ ಭವ್ಯಾಗೆ ಅಕ್ಕ ಸಲಹೆ
ಬಳಿಕ ಬಿಗ್ ಬಾಸ್ ಮನೆಯ ಸ್ಪರ್ಧಿಗಳು ಹಾಗೂ ಮೋಕ್ಷಿತಾ, ಮಂಜು ಕುಟುಂಬದ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಈ ವೇಳೆ, ಪತಿ ಜೊತೆ ನಟಿ ತರಲೆ ಮಾಡಿದ್ದಾರೆ. ಆ ನಂತರ ಮಂಜು ತಂದೆಯ ಕಾಲಿಗೆ ಬಿದ್ದು ಗೌತಮಿ ದಂಪತಿ ಆಶೀರ್ವಾದ ಪಡೆದಿದ್ದಾರೆ. ಪತ್ನಿ ಗೌತಮಿಗೆ ಕಾಲಿಗೆ ಗೆಜ್ಜೆ ಮತ್ತು ಸರವನ್ನು ಗಿಫ್ಟ್ ಆಗಿ ನೀಡಿದ್ದಾರೆ. ಈ ವೇಳೆ ಪತಿಯನ್ನು ತಬ್ಬಿ ಮುದ್ದಾಡಿದ್ದಾರೆ.
ಇನ್ನೂ ಅಭಿಷೇಕ್ ಕಾಸರಗೋಡು ಅವರನ್ನು 2018ರ ಡಿ.31 ಗೌತಮಿ ಮದುವೆಯಾದರು. ಚಿತ್ರರಂಗದಲ್ಲಿ ಕ್ಯಾಮರಾಮ್ಯಾನ್ ಆಗಿ ಗುರುತಿಸಿಕೊಂಡಿರುವ ಅಭಿಷೇಕ್ ಅವರು ಪುನೀತ್ ರಾಜ್‌ಕುಮಾರ್ ನಿರ್ಮಾಣದ ಮಾಯಾ ಬಜಾರ್, ಗ್ರಾಮಾಯಣ, ಕೃಷ್ಣ ಟಾಕೀಸ್ ಸೇರಿದಂತೆ ಹಲವು ಚಿತ್ರಗಳಿಗೆ ಅವರು ಕೆಲಸ ಮಾಡಿದ್ದಾರೆ.