ಹಾಸನ: ಮೈಕ್ ಸಿಕ್ಕಿದೆ, ಜನ ಶಿಳ್ಳೆ ಹೊಡೀತಾರೆ ಅಂತ ಮಾತನಾಡಿದ್ದಾರೆ. ಪೆನ್‌ಡ್ರೈವ್ ಒಳಗಿದ್ದ ವಿಡಿಯೋ ಮಾಡಿದ್ದು ಯಾರು? ಮೊದಲು ಆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಎಂಎಲ್‌ಸಿ ಡಾ.ಸೂರಜ್ ರೇವಣ್ಣ (Suraj Revanna) ವಿರುದ್ಧ ಸಂಸದ ಶ್ರೇಯಸ್ ಪಟೇಲ್ (Shreyas Patel) ವಾಗ್ದಾಳಿ ನಡೆಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್‌ಡ್ರೈವ್ (Pendrive) ವಿಚಾರ ನಾನು ಮಾತನಾಡಲ್ಲ. ಅದರಿಂದ ಎಷ್ಟೋ ಹೆಣ್ಣು ಮಕ್ಕಳ ಜೀವನ ಹಾಳಾಗಿದೆ. ಅನೇಕರು ಬಲಿಪಶು ಆಗಿದ್ದಾರೆ. ಅದಕ್ಕೆ ಕಾರಣ ಯಾರು? ಎಂಎಲ್‌ಸಿಯಾಗಿ ಅವರ ಸಾಧನೆ ಏನು ಎಂಬ ಬಗ್ಗೆ ಪಟ್ಟಿ ಬಿಡುಗಡೆ ಮಾಡಲಿ. ದೇವೇಗೌಡರು, ರೇವಣ್ಣ ಅವರದ್ದು ಬಿಡಿ, ಇವರ ಸಾಧನೆ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಹೊಸ ವರ್ಷದಲ್ಲಿ 3 ದಿನಕ್ಕೆ 3 ನಾಮ ಹಾಕಿದ್ದಾರೆ, ಇನ್ನೂ ಬಾಕಿಯಿದೆ: ಛಲವಾದಿ ನಾರಾಯಣಸ್ವಾಮಿ
ಈಗಾಗಲೇ ಜನ ಬುದ್ಧಿ ಕಲಿಸಿದ್ದು, ಮುಂದೆಯೂ ಮಂಗಳಾರತಿ ಮಾಡುತ್ತಾರೆ. 2028ರ ಚುನಾವಣೆಯಲ್ಲಿ ಯಾರು ಏನಾಗುತ್ತಾರೆ ಎಂಬುದು ಗೊತ್ತಾಗಲಿದೆ. ಆದರೆ ಅಭಿವೃದ್ಧಿ ಕೆಲಸಕ್ಕೆ ಬೆಂಬಲ ಕೊಡಲಿ, ಇಲ್ಲದಿದ್ದರೆ ಸುಮ್ಮನಿರಲಿ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಜ.6 ರಿಂದ ಹಳದಿ ಮಾರ್ಗದಲ್ಲಿ ಮೆಟ್ರೋ ಶುರುವಾಗಲ್ಲ: BMRCL ಸ್ಪಷ್ಟನೆ
ಸಾರಿಗೆ ಬಸ್ ದರ ಏರಿಕೆ ಅನಿವಾರ್ಯ. ಇಂಧನ ದರ ಜಾಸ್ತಿ ಆಗಿದೆ. ಸಾರಿಗೆ ಇಲಾಖೆ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ಕೊಟ್ಟಿದ್ದೇವೆ. ಜೀವನ ನಿರ್ವಹಣಾ ವೆಚ್ಚ ಜಾಸ್ತಿ ಆಗುತ್ತಿದೆ. ಹಾಲು, ಬಸ್ ದರ ಏರಿಕೆ ನಾವಷ್ಟೇ ಮಾಡಿಲ್ಲ. ಎಲ್ಲಾ ಸರ್ಕಾರಗಳು ಮಾಡಿವೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಶಾಶ್ವತ ಗ್ಯಾರಂಟಿ ನೀಡಿದ್ದು, ಮುಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು. ಇದನ್ನೂ ಓದಿ: ಮಟನ್ 100 ರೂಪಾಯಿ ಇದ್ದದ್ದು 500 ರೂಪಾಯಿ ಆದ್ರೆ ತಗೋತೀರ – ಟಿಕೆಟ್ ದರ ಏರಿಕೆ ಬಗ್ಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ