ಬೆಂಗಳೂರು: ಟೆಕ್ಕಿ ಅತುಲ್ ಸುಭಾಶ್ (Atul Subhash) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಮೂವರು ಆರೋಪಿಗಳಿಗೆ ಬೆಂಗಳೂರು ನ್ಯಾಯಾಲಯ (Bengaluru Court) ಜಮೀನು ಮಂಜೂರು ಮಾಡಿದೆ.
ನಿಖಿತಾ ಸಿಂಘಾನಿಯಾ, ನಿಶಾ ಸಿಂಘಾನಿಯ ಹಾಗೂ ಅನುರಾಗ್ ಸಿಂಘಾನಿಯಾಗೆ 29ನೇ ಸಿಸಿಹೆಚ್ ಕೋರ್ಟ್ ಜಾಮೀನು (Bail) ನೀಡಿದೆ. ಇದನ್ನೂ ಓದಿ: ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್ ಮೇಲೆ ಕೇಸ್ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್
ಅತುಲ್ ಆತ್ಮಹತ್ಯೆ ಸಂಬಂಧ ಮೂವರನ್ನ ಬಂಧಿಸಿದ್ದ ಮಾರತಹಳ್ಳಿ ಪೊಲೀಸರು ಬಂಧಿಸಿತ್ತು. ಬಂಧನ ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಜ.4 ರಂದು ಜಾಮೀನು ಅರ್ಜಿ ಇತ್ಯರ್ಥ ಮಾಡುವಂತೆ ಕೆಳ ನ್ಯಾಯಾಲಯಕ್ಕೆ ಸೂಚಿಸಿತ್ತು.ಈ ಹಿನ್ನಲೆಯಲ್ಲಿ ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಹೆತ್ತ ಮಗು ತನ್ನ ಬಳಿಯಿಲ್ಲದಿದ್ದರೂ ಅನಾಥ ಮಕ್ಕಳಿಗೆ ಸಹಾಯ – ಅತುಲ್ ಸಮಾಜಮುಖಿ ಕಾರ್ಯಕ್ಕೆ ಮನಸೋತ ಸ್ನೇಹಿತರು
ಏನಿದು ಪ್ರಕರಣ?
ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಡಿ.9 ರಂದು ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗಿದ್ದ ಇವರು ಸುಮಾರು 40 ಪುಟಗಳ ಡೆತ್ ನೋಟ್ ಬರೆದಿದ್ದ ಇವರು, ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿ ತಾನು ಅನುಭವಿಸಿದ್ದ ಸಂಕಷ್ಟಗಳನ್ನು ವಿವರಿಸಿದ್ದರು.