60% ಕಮೀಷನ್‌ಗೆ ದಾಖಲೆ ಕೇಳಿದ ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
2 Min Read
Siddaramaiah HD Kumaraswamy

ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದ ಮೇಲೆ ಹೆಚ್‌ಡಿಕೆ ಮಾಡಿದ್ದ 60% ಕಮೀಷನ್ ಆರೋಪಕ್ಕೆ ದಾಖಲೆ ಕೇಳಿದ್ದ ಸಿಎಂಗೆ ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ತಿರುಗೇಟು ಕೊಟ್ಟಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯರನ್ನ ಹಿಟ್ ಅಂಡ್ ರನ್ ಎಂದು ಲೇವಡಿ ಮಾಡಿದ್ದಾರೆ.ಇದನ್ನೂ ಓದಿ: ಅಸ್ಸಾಂ ಮೂಲದವರಿಂದ ಕೊಡಗಿನಲ್ಲಿ ಗಾಂಜಾ ದಂಧೆ – ಮಾಲು ಸಹಿತ ನಾಲ್ವರು ಅರೆಸ್ಟ್‌

ಟ್ವೀಟ್‌ನಲ್ಲಿ ಏನಿದೆ?
ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿದ ಆರೋಪ. ನಮ್ಮ ಪಕ್ಷದ ಸರ್ಕಾರಕ್ಕಿಂತ ಹಿಂದಿನ ಬಿಜೆಪಿ ಸರ್ಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು. ಕಾಂಗ್ರೆಸ್ ಸರ್ಕಾರದಲ್ಲೂ 40% ಕಮೀಷನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರ ಆರೋಪ.

ಕಮೀಷನ್ ವ್ಯವಹಾರ ಇಲ್ಲ ಎಂದಾದರೆ, ಯಾಕಪ್ಪಾ ಹಾಗೆ ಹೇಳಿದಿರಿ? ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರ್ಕಾರದ ಮೇಲೆ 40% ಕಮೀಷನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ?

ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ಘನ ಸನ್ನಿಧಾನಕ್ಕೆ ಹಾಗೂ ಮಾನ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ..? ಕಮೀಷನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರನನ್ನು ರಕ್ಷಿಸಿ.

60% ಕಮೀಷನ್.
ಮುಖ್ಯಮಂತ್ರಿ ಹಿಟ್ ಅಂಡ್ ರನ್. ಇದನ್ನೂ ಓದಿ:ಡಿವೋರ್ಸ್‌ ಆದ್ರೆ ಚಹಲ್‌ ಧನಶ್ರೀಗೆ ಎಷ್ಟು ಜೀವನಾಂಶ ಕೊಡಬೇಕು? ಇಬ್ಬರ ಸಂಪತ್ತು ಎಷ್ಟಿದೆ?

 

Share This Article