ಅಸ್ಸಾಂ ಮೂಲದವರಿಂದ ಕೊಡಗಿನಲ್ಲಿ ಗಾಂಜಾ ದಂಧೆ – ಮಾಲು ಸಹಿತ ನಾಲ್ವರು ಅರೆಸ್ಟ್‌

Public TV
1 Min Read
Kodagu 4

ಮಡಿಕೇರಿ: ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಕ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ (Ganja Sale) ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Ganja

ಹೊಕ್ಕೇರಿ ಗ್ರಾಮದಲ್ಲಿ ನೆಲೆಸಿರುವ ಅಸ್ಸಾಂ ರಾಜ್ಯ ಮೂಲದ ಸೋಫಿಕುಲ್ ಇಸ್ಲಾಂ (24) ವರ್ಷ, ಇಮ್ಮಿಯಾಜ್ ಆಲಿ (20) ರೋಹಿಥಾನ್ (50) ಹಾಗೂ ಕೋಣನಕಟ್ಟೆ-ಸುಳುಗೋಡು ಗ್ರಾಮದ ನಿವಾಸಿ ಯೂಸೂಫ್ ಆಲಿ (32) ಬಂಧಿತ ಆರೋಪಿಗಳು. ಇವರ ಬಳಯಿಂದ 2 ಕೆಜಿ 481 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್‌ ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು ಪಿ.ಕೆ, ಸಿದ್ದಾಪುರ ಪಿಎಸ್‌ಐ ರಾಘವೇಂದ್ರ ದಾಳಿ ನಡೆಸಿ. ಆರೋಪಿಗಳನ್ನು ಬಂಧಿಸಿದ್ದಾರೆ.

ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಶ್ಲಾಘಿಸಿದ್ದಾರೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಗಾಂಜಾ ಮತ್ತಿತರ ಮಾದಕ ವಸ್ತುಗಳ ಸಾಗಾಟ ಅಥವಾ ಮಾರಾಟದ ಕುರಿತು ಮಾಹಿತಿ ಇದ್ದರೆ ಪೊಲೀಸರ ಗಮನಕ್ಕೆ ತರುವಂತೆ ಎಸ್‌ಪಿ ಮನವಿ ಮಾಡಿದ್ದಾರೆ.

Share This Article