ಅಮರಾವತಿ: ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ (Tirupati Temple) ಬುಧವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.
ತಿರುಪತಿಯಲ್ಲಿ ದರ್ಶನಕ್ಕೆ ಟಿಕೆಟ್ ವಿತರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ. ತಿರುಪತಿಯ ವಿಷ್ಣು ನಿವಾಸದ ಬಳಿ ಇರುವ ತಿರುಮಲ ಶ್ರೀವಾರಿ ವೈಕುಂಠ ದ್ವಾರದಲ್ಲಿ ಬುಧವಾರ ರಾತ್ರಿ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಗಡ್ಕರಿ ಭೇಟಿಯಾದ ಹೆಚ್‌ಡಿಕೆ – ಮಂಡ್ಯ ಹೊರವರ್ತುಲ ರಸ್ತೆ ಯೋಜನೆ, ಬೈಪಾಸ್ ಅಭಿವೃದ್ಧಿಗೆ ಮನವಿ
ನೂರಾರು ಭಕ್ತರು ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್‌ಗಾಗಿ ಮುಗಿಬಿದ್ದಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ‘ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.
Horrible scenes emerging from Tirupathi queue complex stampede????????
Atleast 4 people are dead in the stampede that took place during the Darshan ticket distributions.@PawanKalyan @TTDevasthanams should change the way they open the gates, like some mad rush, instead of sending… pic.twitter.com/rajm3zYR3o
— Tathvam-asi (@ssaratht) January 8, 2025
ತಿರುಪತಿ ದೇವಸ್ಥಾನದ ಕಾಲ್ತುಳಿತ ಘಟನೆಯ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಜ.10ರಿಂದ ಆರಂಭವಾಗುವ 10 ದಿನಗಳ ವೈಕುಂಠ ದ್ವಾರ ದರ್ಶನಕ್ಕೆ ದೇಶ-ವಿದೇಶಗಳಿಂದ ನೂರಾರು ಭಕ್ತರು ಆಗಮಿಸಿದ್ದರು. ಇದನ್ನೂ ಓದಿ: ಭಯೋತ್ಪಾದನೆ ಜಾಗತಿಕ ಶಾಂತಿಗೆ ದೊಡ್ಡ ಬೆದರಿಕೆಯಾಗಿದೆ – ವಿದೇಶಾಂಗ ಸಚಿವ ಜೈಶಂಕರ್