Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಗ್ಯಕರ ಮಗುವಿಗೆ ಜನ್ಮ ನೀಡುವ 25 ವರ್ಷದೊಳಗಿನ ಯುವತಿಯರಿಗೆ ಬಂಪರ್‌ ಬಹುಮಾನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆರೋಗ್ಯಕರ ಮಗುವಿಗೆ ಜನ್ಮ ನೀಡುವ 25 ವರ್ಷದೊಳಗಿನ ಯುವತಿಯರಿಗೆ ಬಂಪರ್‌ ಬಹುಮಾನ!

Latest

ಆರೋಗ್ಯಕರ ಮಗುವಿಗೆ ಜನ್ಮ ನೀಡುವ 25 ವರ್ಷದೊಳಗಿನ ಯುವತಿಯರಿಗೆ ಬಂಪರ್‌ ಬಹುಮಾನ!

Public TV
Last updated: January 9, 2025 12:14 pm
Public TV
Share
2 Min Read
Healthy Babies
SHARE

ಮಾಸ್ಕೋ: ದೇಶದಲ್ಲಿ ಜನನ ಪ್ರಮಾಣ ಹೆಚ್ಚಿಸಲು ಚೀನಾ, ಜಪಾನ್‌ ಮಾದರಿಯಲ್ಲೇ ರಷ್ಯಾ (Russia) ಸಹ ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿದೆ. ಈಗಾಗಲೇ ‌ಜನಸಂಖ್ಯಾ ಹೆಚ್ಚಳಕ್ಕೆ ʻಸೆಕ್ಸ್‌ ಸಚಿವಾಲಯʼ ಸ್ಥಾಪಿಸಲು ಮುಂದಾಗಿರುವ ಪುಟಿನ್‌ ನೇತೃತ್ವದ ಸರ್ಕಾರ (Russian Government) ಈಗ ಹೊಸದೊಂದು ಆಫರ್‌ ಘೋಷಣೆ ಮಾಡಿದೆ.

Healthy Babies 2

ಹೌದು.. ಆರೋಗ್ಯಕರ ಮಗುವಿಗೆ ಜನ್ಮ ನೀಡುವ 25 ವರ್ಷದೊಳಗಿನ ವಿದ್ಯಾರ್ಥಿನಿಯರಿಗೆ (Female Students) 1 ಲಕ್ಷ ರುಬೆಲ್ಸ್‌ (ಸುಮಾರು 81,000 ರೂ.) ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ಪರಿಚಯಿಸಿದೆ. ಸದ್ಯಕ್ಕೆ ಇಡೀ ದೇಶಾದ್ಯಂತ ಈ ಯೋಜನೆಯನ್ನು ಜಾರಿಗೊಳಿಸಲಾಗಿಲ್ಲ, ರಷ್ಯಾದ ಕರೇಲಿಯಾ ಎಂಬ ಪ್ರದೇಶದಲ್ಲಿ ಮಾತ್ರ ಜಾರಿಗೆ ತರಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು – 15,000 ಎಕ್ರೆ ಪ್ರದೇಶಕ್ಕೆ ಬೆಂಕಿ, ಐವರು ಸಜೀವ ದಹನ

Vladimir Putin

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಸ್ಥಳೀಯ ವಿಶ್ವವಿದ್ಯಾಲಯ ಅಥವಾ ಖಾಸಗಿ ಕಾಲೇಜುಗಳಲ್ಲಿ ಪೂರ್ಣ ಸಮಯದ ವಿದ್ಯಾರ್ಥಿಗಳಾಗಿರಬೇಕು. 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು ಹಾಗೂ ಕರೇಲಿಯಾ ಪ್ರದೇಶದ ನಿವಾಸಿಗಳೇ ಆಗಿರಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ಕಳೆದ ವರ್ಷ ರಷ್ಯಾದಲ್ಲಿ ಜನನ ಪ್ರಮಾಣವು ಸಾರ್ವಕಾಲಿಕ ಕನಿಷ್ಠ ಮಟ್ಟ ತಲುಪಿದೆ. 2024ರ ಮೊದಲಾರ್ಧದಲ್ಲಿ 5,99,600 ಮಕ್ಕಳ ಜನನವಾಗಿದ್ದು, 2023ರ ಅವಧಿಗಿಂತಲೂ 16,000 ಮಕ್ಕಳ ಜನನ ಕಡಿಮೆಯಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ಜನಸಂಖ್ಯೆ ಹೆಚ್ಚಳಕ್ಕೆ ರಷ್ಯಾದಲ್ಲಿ ʻಸೆಕ್ಸ್‌ ಸಚಿವಾಲಯʼ ಸ್ಥಾಪನೆಗೆ ಪ್ಲ್ಯಾನ್‌ – ಭಾರತದಲ್ಲಿ ಏನಾಗ್ತಿದೆ?

Population

ಕೆಲ ದಿನಗಳ ಹಿಂದೆಯಷ್ಟೇ ಭಾರತದಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೆಚ್ಚು ಮಕ್ಕಳನ್ನು ಹೊಂದುವಂತೆ ಜನರಲ್ಲಿ ಮನವಿ ಮಾಡಿದ್ದರು, 2 ಅಥವಾ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದವರಿಗೆ ಮಾತ್ರ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸುವ ಅವಕಾಶ ನೀಡುವಂತಹ ಹೊಸ ಕಾನೂನು ರೂಪಿಸುವುದಾಗಿಯೂ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌, ನಮ್ಮ ಪೂರ್ವಜರು 16 ಬಗೆಯ ಸಂಪತ್ತನ್ನು ಹೊಂದುವಂತೆ ಆಶೀರ್ವದಿಸುವ ಬದಲಾಗಿ ʻ16 ಮಕ್ಕಳನ್ನು ಹೊಂದುವಂತೆ ಆಶೀರ್ವದಿಸಬೇಕಾದ ಅನಿವಾರ್ಯತೆ ಇದೆʼ ಎಂದು ಜನಸಂಖ್ಯೆ ಹೆಚ್ಚಳದ ಬಗ್ಗೆ ಹೇಳಿದ್ದರು.

ಇನ್ನೂ ಜನಸಂಖ್ಯೆ ನಿಯಂತ್ರಿಸಲು ಚೀನಾ, 80ರ ದಶಕದಲ್ಲಿ ‘ಒಂದು ಮಗುವಿನ ನೀತಿ’ಯನ್ನು ಜಾರಿಗೆ ತಂದಿತ್ತು. ಆದ್ರೆ ವೃದ್ಧರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಒಂದು ಮಗುವಿನ ನೀತಿಯನ್ನು ರದ್ದುಗೊಳಿಸಿ, ʻಎರಡು ಮಗು’ ಮತ್ತು ನಂತರ ‘ಮೂರು ಮಗು’ ನೀತಿಯನ್ನು ಜಾರಿಗೆ ತರಲಾಯಿತು. ಇದೀಗ ಹೆಚ್ಚುಮಕ್ಕಳನ್ನು ಹೊಂದಲು ಪ್ರೋತ್ಸಾಹಿಸುತ್ತಿರುವ ಚೀನಾ, ಹೆಚ್ಚು ಮದುವೆಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಅಲ್ಲದೇ ಯುವಕ-ಯುವತಿಯರು ಪ್ರೀತಿಯಲ್ಲಿ ತೊಡಗುವಂತೆ ಮಾಡಲು ಕಾಲೇಜುಗಳಲ್ಲಿ ವಿಶೇಷ ಕೋರ್ಸ್‌ ಸಹ ಆರಂಭಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: 20 ವರ್ಷಗಳಿಂದ ಪಾಳುಬಿದ್ದಿದ್ದ ಮನೆಯ ಫ್ರಿಡ್ಜ್‌ನಲ್ಲಿತ್ತು ಮಾನವನ ತಲೆಬುರುಡೆ, ಅಸ್ಥಿಪಂಜರ!

TAGGED:Female StudentsHealthy BabiesPopulation Growthrussiayoung womenಜನಸಂಖ್ಯೆ ಹೆಚ್ಚಳಯುವತಿಯರುರಷ್ಯಾರಷ್ಯಾ ಜನಸಂಖ್ಯೆ
Share This Article
Facebook Whatsapp Whatsapp Telegram

Cinema news

Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories

You Might Also Like

Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
9 minutes ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
22 minutes ago
RAMALINGA REDDY
Bengaluru City

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Public TV
By Public TV
30 minutes ago
LPG Commercial Cylinder
Bengaluru City

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Public TV
By Public TV
1 hour ago
Haveri Tractor Driver Death
Crime

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Public TV
By Public TV
3 hours ago
Kolar Head Constable Heart Arttack
Districts

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?