ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ದಟ್ಟ ಮಂಜು – 100ಕ್ಕೂ ಅಧಿಕ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ

Public TV
1 Min Read
Delhi

ನವದೆಹಲಿ: ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ದಟ್ಟ ಮಂಜು (Dense fog) ಆವರಿಸಿದ್ದು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಅಲ್ಲದೇ ಕಡಿಮೆ ಗೋಚರತೆಯಿಂದಾಗಿ 100ಕ್ಕೂ ಅಧಿಕ ವಿಮಾನಗಳ (Flights) ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ.

Indigo

ದಟ್ಟ ಮಂಜಿನಿಂದಾಗಿ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಸಂಭವಿಸಿದೆ. CAT-III ಸಾಮರ್ಥ್ಯದ ವಿಮಾನಗಳು ಮಾತ್ರ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಹಾಗೂ ಟೇಕಾಫ್ ಆಗುತ್ತಿವೆ. ವಿಮಾನ ಕಾರ್ಯಾಚರಣೆಯ ಸ್ಥಿತಿಗತಿ ಬಗ್ಗೆ ತಿಳಿದುಕೊಂಡು ಏರ್‌ಪೋರ್ಟ್‌ಗೆ ಹೋಗಿ ಎಂದು ಇಂಡಿಗೊ ತನ್ನ ಎಕ್ಸ್ ಖಾತೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರು | ದರ್ಶನಕ್ಕೆ ಪಾಸ್‌ ಸಿಗದಿದ್ದಕ್ಕೆ ತಿರುಪತಿ ತಿಮ್ಮಪ್ಪನನ್ನೇ ಮನೆಗೆ ಕರೆಸಿದ ಭಕ್ತ!

ಇನ್ನೂ Flightradar.com ಮಾಹಿತಿ ಪ್ರಕಾರ 100ಕ್ಕೂ ಅಧಿಕ ವಿಮಾನಗಳ ಕಾರ್ಯಾಚರಣೆಯಲ್ಲಿ ಏರುಪೇರಾಗಿದೆ. ಈ ನಡುವೆ ವಿಮಾನಗಳ ಕಾರ್ಯಾಚರಣೆ ಬಗ್ಗೆ ವಿಮಾನಯಾನ ಕಂಪನಿಗಳ ಜೊತೆ ಸಂಪರ್ಕದಲ್ಲಿರಿ ಎಂದಿರುವ ದೆಹಲಿ ವಿಮಾನ ನಿಲ್ದಾಣವು, ಉಂಟಾದ ಸಮಸ್ಯೆಗೆ ಪ್ರಯಾಣಿಕರ ಕ್ಷಮೆ ಕೋರಿದೆ. ಇದನ್ನೂ ಓದಿ: ಬೈಕ್ ನಿಲ್ಲಿಸಲು ಮೆಟ್ರೋ ಪಾರ್ಕಿಂಗ್‌ ಬಳಸುತ್ತಿದ್ದರೆ ಹುಷಾರಾಗಿರಿ!

ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ ಸುಮಾರು 1,300 ವಿಮಾನಗಳು ಕಾರ್ಯಾಚರಣೆ ನಡೆಸುತ್ತವೆ. ಇದನ್ನೂ ಓದಿ: Tirupati Stampede: ಗಾಯಗೊಂಡ ಗಾಯಾಳುಗಳಿಗೆ ವಿಶೇಷ ದರ್ಶನ, ಅಧಿಕಾರಿಗಳು ಅಮಾನತು

Share This Article