ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್‌ ಹೂವು

Public TV
2 Min Read
AYODHYA

– ದಿನಕ್ಕೆ 2 ಬಾರಿ ಅಗ್ನಿಹೋತ್ರ ಮಂತ್ರ, 6 ಲಕ್ಷ ಶ್ರೀರಾಮ ಸ್ತೋತ್ರ ಪಠಣ

ಲಕ್ನೋ: ಅಯೋಧ್ಯೆ ರಾಮಮಂದಿರದ (Ram Mandir) ವಾರ್ಷಿಕೋತ್ಸವ ಸಂಭ್ರಮ ಮನೆ ಮಾಡಿದೆ. ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಯಾಗಿ 1 ವರ್ಷ ತುಂಬಿದ ಹಿನ್ನೆಲೆ ಅಯೋಧ್ಯೆಯಲ್ಲಿ 3 ದಿನಗಳ ಕಾಲ ಹತ್ತು ಹಲವು ಕಾರ್ಯಕ್ರಮಗಳು ನಡೆಯಲಿವೆ. ಇನ್ನೂ ಮೂರು ದಿನಗಳ ಕಾಲ ಅಯೋಧ್ಯೆಯಲ್ಲಿ (Ayodhya) ಹಬ್ಬದ ವಾತಾವರಣ ಇರಲಿದೆ.

ಮೊದಲ ವಾರ್ಷಿಕೋತ್ಸವದ ಹಿನ್ನೆಲೆ ರಾಮಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್‌ ಹೂಗಳನ್ನ ಬಳಸಲಾಗಿದೆ. ಬಾಲರಾಮನ ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ ಎಲ್ಲೆಡೆ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಇದನ್ನೂ ಓದಿ: ಅಯೋಧ್ಯೆಯ ಶ್ರೀರಾಮನ ಮೂರ್ತಿಗೆ `ರಾಮಲಲ್ಲಾʼ ಅಂತ ಕರೆಯುವುದೇಕೆ?

After 500 years of wait Ram Navami will be celebrated in Ram Mandir Ayodhya 2

ದಿನಕ್ಕೆ 2 ಬಾರಿ ಅಗ್ನಿಹೋತ್ರ ಮಂತ್ರ ಪಠಣ:
ಇಂದಿನಿಂದ ಮೂರು ದಿನಗಳ ಕಾಲ ಹಲವು ಕಾರ್ಯಕ್ರಮಗಳು ನಡೆಯಲಿದೆ. ಇದರ ಭಾಗವಾಗಿ ಶುಕ್ಲ ಯಜುರ್ವೇದದಿಂದ ಅಗ್ನಿಹೋತ್ರ ಮಂತ್ರಪಠಣ ಮಾಡಲಾಗುತ್ತದೆ. ಬೆಳಗ್ಗೆ 8 ರಿಂದ 11 ಹಾಗೂ ಮಧ್ಯಾಹ್ನ 2 ರಿಂದ 5 ಗಂಟೆವರೆಗೆ ಮಂತ್ರ ಪಠಣ ಮಾಡಲಾಗುತ್ತದೆ. ಇದರೊಂದಿಗೆ ಲಕ್ಷ ರಾಮ ರಕ್ಷಾ ಸ್ತೋತ್ರ ಮತ್ತು ಹನುಮಾನ್ ಚಾಲೀಸಾ ಹಾಗೂ 6 ಲಕ್ಷ ಶ್ರೀ ರಾಮ ಮಂತ್ರದ ಪಠಣ ಮಾಡಲಾಗುತ್ತದೆ. ಮಂದಿರದ ನೆಲಮಾಳಿಗೆಯಲ್ಲಿ ಪ್ರತಿದಿನ ಮಧ್ಯಾಹ್ನ 3 ಗಂಟೆಯಿಂದ 5 ಗಂಟೆವರೆಗೆ ರಾಗ ಸೇವೆ, ಸಂಜೆ 6 ಗಂಟೆಗೆ ಅಭಿನಂದನಾ ಗೀತ ಸೇವೆ ಶ್ರೀರಾಮನಿಗೆ ಅರ್ಪಣೆಯಾಗಲಿದೆ. ಮೊದಲ ಮಹಡಿಯಲ್ಲಿ ಸಂಗೀತ ಮಾನಸ ಪಠಣ ನಡೆಯಲಿದೆ.

AYODHYA RAMA MANDIR

ಶುಭ ಯೋಗಗಳು ಹಾಗೂ ದ್ವಾದಶಿ ತಿಥಿಯು 2025ರಲ್ಲಿ ಜನವರಿ 11 ರಂದು ಬಂದಿರುವುದರಿಂದ ಅಯೋಧ್ಯೆ ರಾಮ ಮಂದಿರದ ವಾರ್ಷಿಕ ಪ್ರಾಣ ಪ್ರತಿಷ್ಠಾಪನೆಯನ್ನು ಜನವರಿ 22ರ ಬದಲಾಗಿ ಜನವರಿ 11ರಂದು ಆಚರಿಸಲಾಗುತ್ತಿದೆ. ಈಗಾಗಲೇ ಅಯೋಧ್ಯೆಯ ರಾಮ ಮಂದಿರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಒಂದೊಂದೇ ಕಾರ್ಯಕ್ರಮಗಳು ನೆರವೇರುತ್ತಿವೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಇಂದಿನಿಂದ ಮೂರು ದಿನ ಹಲವು ಕಾರ್ಯಕ್ರಮ

ಇಂದಿನಿಂದ 3 ದಿನ ಏನೇನು ಕಾರ್ಯಕ್ರಮ?
* ಜ.11ರ ಮೊದಲ ದಿನ ಪ್ರತಿಷ್ಠಾ ದ್ವಾದಶಿಯ ಆರಂಭಿಕ ದಿನ, ಕಳೆದ ವರ್ಷದ ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮದಂತೆಯೇ ಕಾರ್ಯಕ್ರಮ ಆರಂಭ
* ‘ಪಂಚಾಮೃತ’ ಮತ್ತು ಸರಯೂ ಜಲದ ಅಭಿಷೇಕವನ್ನು ಒಳಗೊಂಡಂತೆ ಅಭಿಷೇಕ ಸಮಾರಂಭ ಬೆಳಗ್ಗೆ 10 ಗಂಟೆಗೆ ಶುರು
* ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ರಾಮಲಲ್ಲಾಗೆ ಅಭಿಷೇಕ
* ಮಧ್ಯಾಹ್ನ 12.20ಕ್ಕೆ ಪ್ರಾಥಮಿಕ ಆರತಿ
* ಚಿನ್ನದ ಮತ್ತು ಬೆಳ್ಳಿಯ ಎಳೆಗಳಿಂದ ದೆಹಲಿಯಲ್ಲಿ ತಯಾರಿಸಿದ ವಿಶಿಷ್ಟ ಪೀತಾಂಬರಿಯಿಂದ ರಾಮಲಲ್ಲಾ ಮೂರ್ತಿಯ ಅಲಂಕಾರ
* ಬಳಿಕ 3 ದಿನ ಕಾಲ ಮಂಟಪ ಮತ್ತು ಯಜ್ಞಶಾಲೆಯಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಹೋಮಗಳು, ಶಾಸ್ತ್ರೀಯ ಸಾಂಸ್ಕೃತಿಕ ಪ್ರದರ್ಶನಗಳು, ವಿವಿಧ ಆಚರಣೆಗಳು ಮತ್ತು ದೈನಂದಿನ ರಾಮಕಥಾ ಪ್ರವಚನಗಳು ಏರ್ಪಾಡು
* 110 ಗಣ್ಯರು, ಜನಸಾಮಾನ್ಯರು ಸೇರಿ 5,000 ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ

Share This Article