ರೇಣುಕಾಸ್ವಾಮಿ ಕೊಲೆ ಕೇಸ್- ಸೀಜ್ ಮಾಡಿದ್ದ 40.40 ಲಕ್ಷ ಹಣ ವಾಪಸ್ ಕೊಡಿಸುವಂತೆ ಕೋರ್ಟ್‌ಗೆ ದರ್ಶನ್ ಅರ್ಜಿ

Public TV
1 Min Read
Darshan 2

ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಸೀಜ್ ಮಾಡಿದ್ದ 40.40 ಲಕ್ಷ ರೂ. ಹಣವನ್ನು ವಾಪಸ್ ಕೊಡಿಸುವಂತೆ ಕೋರ್ಟ್‌ಗೆ ನಟ ದರ್ಶನ್‌ (Darshan) ಮನವಿ ಮಾಡಿಕೊಂಡಿದ್ದಾರೆ.

ಈ ಸಂಬಂಧ 57ನೇ ಸೆಷನ್ಸ್ ಕೋರ್ಟ್‌ಗೆ ದರ್ಶನ್ ಹಾಗೂ ಪ್ರದೂಷ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ವಿಚಾರಣೆ ವೇಳೆ ಪೊಲೀಸರು ಒಟ್ಟು 40.40 ಲಕ್ಷ ರೂ. ಸೀಜ್ ಮಾಡಿದ್ದರು. ಇದನ್ನೂ ಓದಿ: ಮೈಸೂರಿಗೆ ದರ್ಶನ್‌, ದೆಹಲಿಗೆ ಪವಿತ್ರಾ – ಕೋರ್ಟ್‌ನಿಂದ ಅನುಮತಿ

darshan renukaswamy pavithra gowda

ದರ್ಶನ್ ನಿವಾಸ, ಪ್ರದೂಷ್ ನಿವಾಸ ಹಾಗೂ ವಿಜಯಲಕ್ಷ್ಮಿ ಅವರಿಂದ ಹಣ ವಶಕ್ಕೆ ಪಡೆಯಲಾಗಿತ್ತು. ರೇಣುಕಾಸ್ವಾಮಿ ಕೊಲೆ ಕೇಸಿನ ಸಾಕ್ಷ್ಯ ನಾಶಕ್ಕಾಗಿ ಹಣ ಸಂಗ್ರಹ ಮಾಡಿರುವ ಆರೋಪ ಹೊರಿಸಲಾಗಿತ್ತು.

ತುರ್ತಾಗಿ ಹಣ ಬೇಕಿದ್ದು, ಪೊಲೀಸರು ಸೀಜ್ ಮಾಡಿರುವ ಹಣ ಬಿಡುಗಡೆಗೆ ಸೂಚಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಪಿಪಿಗೆ ಕೋರ್ಟ್ ಸೂಚನೆ ನೀಡಿದೆ. ಈ ಮಧ್ಯೆ, ಸೀಜ್‌ ಆದ ಹಣದ ತನಿಖೆ ಅಗತ್ಯವಿದ್ದು, ತಮ್ಮ ವಶಕ್ಕೆ ನೀಡವಂತೆ ಐಟಿ ಅರ್ಜಿ ಸಲ್ಲಿಕೆ ಮಾಡಿದೆ. ಇದನ್ನೂ ಓದಿ: ದರ್ಶನ್‌ ಸರ್‌ಗೆ 2025 ಒಳ್ಳೆಯದಾಗುತ್ತದೆ: ಶರಣ್

ಐಟಿ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ದರ್ಶನ್ ಪರ ವಕೀಲರಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕೋರ್ಟ್‌ನಲ್ಲಿ ಪವಿತ್ರಾ ಭಾವುಕ – ಬೆನ್ನುತಟ್ಟಿ ಸಂತೈಸಿದ ದರ್ಶನ್‌

Share This Article