ಆಸ್ತಿಗಾಗಿ ತಂದೆ, ತಾಯಿಯನ್ನು ಹತ್ಯೆಗೈದಿದ್ದ ಪಾಪಿ ಪುತ್ರ ಅರೆಸ್ಟ್

Public TV
0 Min Read
Hubballi Murder

ಹುಬ್ಬಳ್ಳಿ: ಆಸ್ತಿಗಾಗಿ ತಂದೆ ಹಾಗೂ ಮಲತಾಯಿಯನ್ನು ಕೊಲೆ ಮಾಡಿದ್ದ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಗಂಗಾಧರ ಎಂದು ಗುರುತಿಸಲಾಗಿದೆ. ಶುಕ್ರವಾರ ಹುಬ್ಬಳ್ಳಿಯ ಕುಸಗುಲ್ ಗ್ರಾಮದಲ್ಲಿ ಅಶೋಕ್ ಹಾಗೂ ಶಾರದಾ ಎಂಬವರನ್ನು ಆರೋಪಿ ಕೊಲೆ ಮಾಡಿದ್ದ. ತನಿಖೆ ವೇಳೆ ಆಸ್ತಿಗಾಗಿ ಮಗನೇ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿತ್ತು.

ಕೇವಲ ಎರಡು ಎಕರೆ ಜಮೀನಿಗಾಗಿ ಹೆತ್ತವರನ್ನೇ ಆರೋಪಿ ಕಬ್ಬಿಣದ ರಾಡ್‍ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಬಳಿಕ ಸ್ಥಳದಿಂದ ಪರಾರಿಯಾಗಿದ್ದ. ಕೊಲೆ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಕೊಲೆ ನಡೆದ ಸ್ಥಳದಲ್ಲಿ ಗ್ರಾಮೀಣ ಠಾಣೆ ಪೊಲೀಸರು ಆರೋಪಿಯನ್ನು ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

Share This Article