ಮುಂಬೈ: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಕಾಲಿಗೆ ಗಾಯ ಮಾಡಿಕೊಂಡಿದ್ದು, ಪುಷ್ಪಾದ ಶ್ರೀವಲ್ಲಿ ಈಗ ಬೆಡ್ ರೆಸ್ಟ್ ಮಾಡುತ್ತಿದ್ದಾರೆ.
ಈ ಸಂಬಂಧ ಇನ್‌ಸ್ಟಾದಲ್ಲಿ ಗಾಯಗೊಂಡಿರುವ ಕಾಲಿನ ಭಾಗದ ಫೋಟೋ ಅಪ್ಲೋಡ್ ಮಾಡಿ ಚಿತ್ರದ ನಿರ್ದೇಶಕರ ಬಳಿ ಕ್ಷಮೆ ಕೇಳಿದ್ದಾರೆ.
ಜಿಮ್‌ನಲ್ಲಿ (Gym) ನಾನು ಗಾಯಗೊಂಡಿದ್ದೇನೆ. ಮುಂದಿನ ಕೆಲ ವಾರ ಅಥವಾ ತಿಂಗಳ ಕಾಲ ನಾನು ವಿಶ್ರಾಂತಿಯಲ್ಲಿರುತ್ತೇನೆ. ಚೇತರಿಕೆಯಾಗಲು ಎಷ್ಟು ಸಮಯ ಬೇಕಾಗಬಹುದು ಎನ್ನುವುದು ದೇವರಿಗೆ ಮಾತ್ರ ತಿಳಿದಿದೆ. ನನ್ನ ಕಾಲಿನ ನೋವು ಗುಣವಾದ ಬಳಿಕ ನಾನು ಥಾಮ, ಸಿಕಂದರ್ ಮತ್ತು ಕುಬೇರ ಸೆಟ್‌ಗೆ ಮರಳುತ್ತೇನೆ. ಈ ವಿಳಂಬಕ್ಕೆ ಕ್ಷಮೆ (Sorry) ಕೋರುತ್ತೇನೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕೋರ್ಟ್‌ನಲ್ಲಿ ಪವಿತ್ರಾ ಭಾವುಕ – ಬೆನ್ನುತಟ್ಟಿ ಸಂತೈಸಿದ ದರ್ಶನ್
ರಶ್ಮಿಕಾ ಮುಂದಿನ ಚಿತ್ರದಲ್ಲಿ ಸಲ್ಮಾನ್ ಖಾನ್ ಜೊತೆ ಎ.ಆರ್. ಮುರುಗದಾಸ್ ನಿರ್ದೇಶನದ ಮತ್ತು ಸಾಜಿದ್ ನಾಡಿಯಾಡ್ವಾಲಾ ನಿರ್ಮಾಣದ ಸಿಕಂದರ್ (Sikandar) ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಕಾಜಲ್ ಅಗರ್ವಾಲ್, ರಶ್ಮಿಕಾ, ಸತ್ಯರಾಜ್, ಶರ್ಮಾನ್ ಜೋಶಿ ಮತ್ತು ಪ್ರತೀಕ್ ಬಬ್ಬರ್ ನಟಿಸುತ್ತಿದ್ದು 2025 ರ ಈದ್ ಹಬ್ಬಕ್ಕೆ ಬಿಡುಗಡೆಯಾಗಲಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್- ಸೀಜ್ ಮಾಡಿದ್ದ 40 ಲಕ್ಷ ಹಣ ವಾಪಸ್ ಕೊಡಿಸುವಂತೆ ಕೋರ್ಟ್‌ಗೆ
ದರ್ಶನ್ ಅರ್ಜಿ
View this post on Instagram
ಸಿಕಂದರ್ ನಂತರ ರಶ್ಮಿಕಾ ರಾಹುಲ್ ರವೀಂದ್ರನ್ ನಿರ್ದೇಶನದ ‘ದಿ ಗರ್ಲ್‌ಫ್ರೆಂಡ್’ ಚಿತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಟೀಸರ್ ಅನ್ನು ಇತ್ತೀಚೆಗೆ ವಿಜಯ್ ದೇವರಕೊಂಡ ಬಿಡುಗಡೆ ಮಾಡಿದ್ದರು.
ಅಲ್ಲು ಅರ್ಜುನ್ ಜೊತೆ ರಶ್ಮಿಕಾ ನಟಿಸಿದ್ದ ‘ಪುಷ್ಪ 2’ ಡಿ.5ರಂದು ರಿಲೀಸ್ ಆಗಿ ಭರ್ಜರಿ ಕಲೆಕ್ಷನ್ ಮಾಡಿದೆ. 1800 ಕೋಟಿ.ರೂಗೂ ಅಧಿಕ ಗಳಿಕೆ ಮಾಡಿ ಸಿನಿಮಾ ಗೆದ್ದು ಬೀಗಿದೆ.