ಮೈಸೂರು: ಸಿಎಂ ಸಿದ್ದರಾಮಯ್ಯ (Siddaramaiah ಪಾಲಿಗೆ ಇಂದು ಬಿಗ್ ಡೇ. ಮುಡಾ ಹಗರಣದ (MUDA Case) ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಬುಧವಾರ ಮಹತ್ತರವಾದ ಆದೇಶ ಹೊರ ಬೀಳುವ ಸಾಧ್ಯತೆ ಇದೆ.
ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಇಂದು ಬಹುತೇಕ ಈ ಪ್ರಕರಣದ ಆದೇಶ ನೀಡುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿರು ದೂರುದಾರ ಸ್ನೇಹಮಹಿ ಕೃಷ್ಣ, ಇವತ್ತು ನಿಶ್ಚಿತವಾಗಿಯೂ ಪ್ರಕರಣದ ತನಿಖೆ ಸಿಬಿಐಗೆ ಹೋಗುತ್ತದೆ. ಆದೇಶದ ನಂತರ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ನೀಡುವ ಬೆಳವಣಿಗೆಯೂ ನಡೆಯುತ್ತದೆ ಎಂದಿದ್ದಾರೆ.
ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಆರೋಪ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮೇಲಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಮತ್ತು ಇ.ಡಿ ಅಧಿಕಾರಿಗಳು ಸಿಎಂ ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ.
ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.