ಡೊನಾಲ್ಡ್‌ ಟ್ರಂಪ್‌ ಪ್ರಮಾಣವಚನ ಕಾರ್ಯಕ್ರಮ – ಯಾರೆಲ್ಲ ಭಾಗಿಯಾಗುತ್ತಾರೆ? ಗಣ್ಯರ ಲಿಸ್ಟ್‌ ಇಲ್ಲಿದೆ

Public TV
1 Min Read
donald trump

ವಾಷಿಂಗ್ಟನ್‌: ಡೊನಾಲ್ಡ್ ಟ್ರಂಪ್ (Donald Trump) ಸೋಮವಾರ ವಾಷಿಂಗ್ಟನ್ ಡಿಸಿ ಯ ಕ್ಯಾಪಿಟಲ್‌ನಲ್ಲಿ (Capitol in Washington D/C) ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಅಮೆರಿಕದ 47 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.

Xi Jinping 1

ವಿದೇಶಿ ಅತಿಥಿಗಳು ಯಾರು?
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಅರ್ಜೆಂಟೀನಾ ಅಧ್ಯಕ್ಷ -ಜೇವಿಯರ್ ಮಿಲಿ, ಹಂಗೇರಿಯನ್ ಪ್ರಧಾನಿ ವಿಕ್ಟರ್ ಓರ್ಬನ್, ಜಪಾನಿನ ವಿದೇಶಾಂಗ ಸಚಿವ ಟಕೇಶಿ ಇವಾಯಾ ಅವರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ರಷ್ಯಾದ ತೈಲ ವ್ಯಾಪಾರದ ಮೇಲೆ ಬೈಡೆನ್‌ ಹೊಸ ನಿರ್ಬಂಧ – ಭಾರತಕ್ಕೆ ಬೀಳುತ್ತಾ ಹೊಡೆತ?

ಬಲ ಪಂಥೀಯ ನಾಯಕರಾದ ನಿಗೆಲ್ ಫರಾಜ್ (ಯುಕೆ), ಎರಿಕ್ ಜೆಮ್ಮೌರ್ (ಫ್ರಾನ್ಸ್) ಮತ್ತು ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಭಾಗಿಯಾಗಿವ ಸಾಧ್ಯತೆಯಿದೆ.

Donald Trump Elon Musk

ಗೈರಾಗಲಿರುವ ಗಣ್ಯರು
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆಹ್ವಾನವಿಲ್ಲ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕೂಡ ಗೈರುಹಾಜರಾಗಿದ್ದಾರೆ. ಮಾಜಿ ಪ್ರಥಮ ಮಹಿಳೆ ಮಿಚೆಲ್ ಒಬಾಮಾ ಗೈರಾಗಲಿದ್ದಾರೆ.

ಭಾಗವಹಿಸುವ ಉದ್ಯಮಿಗಳು:
ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್‌ನ ಸಿಇಒ ಎಲಾನ್ ಮಸ್ಕ್, ಅಮೆಜಾನ್ ಕಾರ್ಯನಿರ್ವಾಹಕ ಅಧ್ಯಕ್ಷ ಜೆಫ್ ಬೆಜೋಸ್, ಗೂಗಲ್‌ ಸಿಇಒ ಸುಂದರ್‌ ಪಿಚೈ, ಆಪಲ್‌ ಸಿಇಒ ಟಿಮ್‌ ಕುಕ್‌, ಓಪನ್‌ಎಐ ಸಿಇಒ ಸ್ಯಾಮ್ ಆಲ್ಟ್‌ಮನ್, ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್, ಟಿಕ್‌ ಟಾಕ್‌ ಸಿಇಒ ಶೌ ಜಿ ​​ಚೆವ್ ಭಾಗಿಯಾಗಲಿದ್ದಾರೆ.

 

Share This Article