ಕಾರ್ಮಿಕರ ಹಲ್ಲೆ ಖಂಡನೀಯ, ಆರೋಪಿಗಳ ಬಂಧನಕ್ಕೆ ಸೂಕ್ತ ಕ್ರಮ – ಎಂ.ಬಿ ಪಾಟೀಲ್

Public TV
1 Min Read
MB Patil

ಬೆಂಗಳೂರು/ವಿಜಯಪುರ: ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ, ಆರೋಪಿಗಳ ಬಂಧನಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ (MB Patil)  ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾರ್ಮಿಕರ ಮೇಲೆ ಹಲ್ಲೆ ಖಂಡನೀಯ, ಈ ಕುರಿತು ಎಸ್‌ಪಿ ಜೊತೆ ಸಂಪರ್ಕದಲ್ಲಿದ್ದೇನೆ. ಪೊಲೀಸರಿಂದ ನಾನು ಮಾಹಿತಿ ಪಡೆದಿದ್ದೇನೆ. ಈಗಾಗಲೇ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಎಪಿಎಂಸಿ ವ್ಯಾಪ್ತಿಯ ಬಾವಿಕಟ್ಟಿ ತಾಂಡಾದಲ್ಲಿ ಈ ಘಟನೆ ನಡೆದಿದೆ. ಮೂವರು ದಲಿತ ಸಮುದಾಯಕ್ಕೆ ಸೇರಿದವರು. ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸುತ್ತೇವೆ. ಈ ಕುರಿತು ಜಿಲ್ಲಾಧಿಕಾರಿಯ ಜೊತೆಗೂ ಮಾತನಾಡಿದ್ದೇನೆ. ಮಾಲೀಕ ಖೇಮು ರಾಠೋಡ ಕಾಂಪ್ರಮೈಸ್‌ಗೂ ಯತ್ನ ನಡೆಸಿದ್ದ. ಆದರೆ ಅದ್ಯಾವುದಕ್ಕೂ ಅವಕಾಶ ಕೊಡದೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಕಿತ್ತಾಟ ಜೋರು – ಕೊನೆಗೂ ಹೈಕಮಾಂಡ್‌ ಎಂಟ್ರಿ

ಘಟನೆ ಏನು?
ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ವಿಜಯಪುರದ ಗಾಂಧಿನಗರ ಏರಿಯಾದಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ನಡೆದಿತ್ತು.

ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ನಿವಾಸಿಗಳಾದ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಮಾದರ ಎಂಬ ಕಾರ್ಮಿಕರ ಮೇಲೆ ಖೇಮು ರಾಠೋಡ ಹಾಗೂ ಸಂಬಂಧಿಕರು ಮನ ಬಂದಂತೆ ಹಲ್ಲೆ ನಡೆಸಿದ್ದರು. ಸದ್ಯ ಕಾರ್ಮಿಕರು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಲೀಕ ಪ್ರತಿದಿನ ಕಾರ್ಮಿಕರಿಗೆ 600 ರೂ. ಕೂಲಿ ನೀಡಲಾಗುತ್ತಿತ್ತು. ಕಳೆದ ಸಂಕ್ರಮಣದಂದು ಮನೆಗೆ ತೆರಳಿದ್ದ ಕಾರ್ಮಿಕರು ಮರಳಿ 16 ರಂದು ಇಟ್ಟಿಗೆ ಭಟ್ಟಿಗೆ ಬಂದಿದ್ದರು. ಬಂದ ಕಾರ್ಮಿಕರು ತಮ್ಮ ಸಾಮಾನುಗಳನ್ನು ಕೊಂಡೊಯ್ಯಲು ಮುಂದಾಗುತ್ತಿದ್ದರು.

ಈ ವಿಚಾರ ತಿಳಿದ ಮಾಲೀಕ ಬೇರೆ ಕಡೆ ಕೆಲಸಕ್ಕೆ ಹೋಗುತ್ತಿರುವುದು ಯಾಕೆ ಎಂದು ಹೇಳಿ ತನ್ನ ಜನರನ್ನು ಕರೆಸಿ ಹಲ್ಲೆ ಮಾಡಿಸಿದ್ದ. ಮೂರು ದಿನ ಕೂಡಿ ಹಾಕಿ ಪೈಪ್‌ನಿಂದ ಬೆನ್ನು, ಕಾಲು, ಸೊಂಟದ ಮೇಲೆ ಮನ ಬಂದಂತೆ ಥಳಿಸಿದ್ದರು.ಇದನ್ನೂ ಓದಿ: ಗೋಮೂತ್ರದ ಔಷಧೀಯ ಗುಣಗಳನ್ನ ಪರಿಗಣಿಸಬೇಕು – ಐಐಟಿ ಮದ್ರಾಸ್‌ ನಿರ್ದೇಶಕ

Share This Article