Ramanagara | ಮೈಕ್ರೋ ಫೈನಾನ್ಸ್ ಹಾವಳಿ – ಮಹಿಳೆ ಆತ್ಮಹತ್ಯೆ

Public TV
2 Min Read
Ramanagara Woman Suicide Micro Finance

ರಾಮನಗರ: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್‌ಗಳ (Micro Finance) ಹಾವಳಿ ಮುಂದುವರಿದಿದೆ. ಫೈನಾನ್ಸ್ ಕಾಟಕ್ಕೆ ಜನರು ಊರು ತೊರೆಯುತ್ತಿರುವುದು ಒಂದು ಕಡೆಯಾದರೇ ಮತ್ತೊಂದೆಡೆ ಜೀವವನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದು ನಿಂತಿದೆ. ಸಾಲಗಾರರ ಕಿರುಕುಳಕ್ಕೆ ಮಹಿಳೆಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಜನರು ಊರು ಖಾಲಿ ಮಾಡಿಕೊಂಡು ವಲಸೆ ಹೋಗುತ್ತಿದ್ದಾರೆ. ಮತ್ತೊಂದೆಡೆ ನಿತ್ಯ ಮನೆಬಳಿ ಬಂದು ಕಿರುಕುಳ ಕೊಡುತ್ತಿರುವ ಫೈನಾನ್ಸ್ ಸಿಬ್ಬಂದಿ ಕಾಟಕ್ಕೆ ಜೀವವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಮನಗರದ  (Ramanagara) ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದ ಯಶೋದಮ್ಮ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನ ವದಂತಿ – ಕಿಲೋ ಮೀಟರ್‌ಗಟ್ಟಲೇ ಕ್ಯೂ ನಿಂತ ಜನ!

ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಯಶೋದಮ್ಮ ಸುಮಾರು ಎಂಟು ಖಾಸಗಿ ಫೈನಾನ್ಸ್ ಕಂಪನಿಗಳಿಂದ 5 ಲಕ್ಷ ಸಾಲ ಪಡೆದಿದ್ದರು. ಕಳೆದ ಎರಡು ತಿಂಗಳಿನಿಂದ ಅನಾರೋಗ್ಯಕ್ಕೀಡಾದ ಹಿನ್ನೆಲೆ ಸರಿಯಾಗಿ ಕೆಲಸಕ್ಕೆ ಹೋಗದೇ ಸಾಲ ಮರುಪಾವತಿ ಮಾಡಿರಲಿಲ್ಲ. ಎರಡು ತಿಂಗಳು ಸಾಲ ಬಾಕಿ ಉಳಿಸಿಕೊಂಡ ಹಿನ್ನೆಲೆ ಫೈನಾನ್ಸ್ ಕಂಪನಿಯ ಸಿಬ್ಬಂದಿ ಮನೆ ಬಳಿ ಬಂದು ಗಲಾಟೆ ನಡೆಸಿ ಇನ್ನೆರಡು ದಿನದಲ್ಲಿ ಸಾಲ ಕಟ್ಟಲಿಲ್ಲ ಅಂದರೆ ಮನೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಬೇಸತ್ತ ಯಶೋದಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ರಾಯಚೂರಿನ ಮೃತ್ಯುಂಜಯ ಮಠ, ಗೋಶಾಲೆ ನೆಲಸಮ: ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ

ಇನ್ನೂ ಗ್ರಾಮದಲ್ಲಿ ಹಲವು ಮಂದಿ ಇದೇ ರೀತಿ ಫೈನಾನ್ಸ್ ಕಂಪನಿಯಲ್ಲಿ ಸಾಲ ಪಡೆದಿದ್ದು ನಿತ್ಯ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಗ್ರಾಮಕ್ಕೆ ಬಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಮನೆ ಜಪ್ತಿ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಅಲ್ಲದೇ ಒಂದು ಫೈನಾನ್ಸ್‌ನಿಂದ ಸಾಲ ತೀರುವ ಮುನ್ನವೇ ಮತ್ತೊಂದು ಫೈನಾನ್ಸ್ನವರು ಹಣ ಕೊಡುತ್ತೇವೆ ಎಂದು ಜನರಿಗೆ ಸಾಲ ನೀಡಿ ಅಧಿಕ ಬಡ್ಡಿ ಹಾಕುತ್ತಿದ್ದಾರೆ. ಅಲ್ಲದೇ ನಾಲ್ಕು ಜನ ಮಹಿಳೆಯರನ್ನು ಸೇರಿಸಿ ಒಂದು ಗುಂಪು ಮಾಡಿ ಸಾಲ ಕೊಡುತ್ತಾರೆ. ಒಬ್ಬರು ಸಾಲ ಕಟ್ಟದಿದ್ದರೆ ಉಳಿದ ಮೂರು ಮಂದಿಗೆ ಆ ಸಾಲ ಕಟ್ಟುವಂತೆಯೂ ಫೈನಾನ್ಸ್ ಸಿಬ್ಬಂದಿ ಒತ್ತಡ ಹೇರಿ ಮಾನಸಿಕ ಕಿರುಕುಳ ಕೊಡುತ್ತಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಇದನ್ನೂ ಓದಿ: ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು 49 ಲಕ್ಷ ವಂಚಿಸಿದ ಬ್ಯಾಂಕ್ ಮ್ಯಾನೇಜರ್!

ಒಟ್ಟಾರೆ ಗ್ರಾಮೀಣ ಭಾಗದಲ್ಲಿ ಈ ಮೈಕ್ರೋ ಫೈನಾನ್ಸ್ ಭೂತಕ್ಕೆ ಜನ ಕಂಗಾಲಾಗಿದ್ದು, ಖಾಸಗಿ ಫೈನಾನ್ಸ್ ಕಿರುಕುಳ ತಪ್ಪಿಸುವಂತೆ ಅಳಲು ತೋಡಿಕೊಳ್ಳುತ್ತಿದ್ದಾರೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ:ಅಮೆರಿಕದ ಏಳ್ಗೆಗಾಗಿ ವಿದೇಶಗಳಿಗೆ ತೆರಿಗೆ, ಫೆಡರಲ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ರದ್ದು; ಮಹತ್ವದ ಆದೇಶಗಳಿಗೆ ಟ್ರಂಪ್‌ ಸಹಿ

Share This Article