ಹಾಸನ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ವಿದ್ಯಾರ್ಥಿಯೋರ್ವ ನದಿಗೆ ಬಿದ್ದ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.
ಮುಜಾಮಿಲ್ (17) ನದಿಗೆ ಬಿದ್ದ ವಿದ್ಯಾರ್ಥಿ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈತ ಕೆ.ಆರ್ ನಗರದಿಂದ ಹಾಸನಕ್ಕೆ ಎಕ್ಸ್ಪ್ರೆಸ್ ರೈಲಿನಲ್ಲಿ ತೆರಳುತ್ತಿದ್ದ. ಚಲಿಸುತ್ತಿದ್ದ ರೈಲಿನ ಬೋಗಿಯ ಮೆಟ್ಟಿಲ ಮೇಲೆ ಮುಜಾಮಿಲ್ ಒಂದು ಕಾಲಿಟ್ಟು, ಇನ್ನೊಂದು ಕಾಲು ಬೋಗಿಯಿಂದ ಹೊರಗೆ ಹಾಕಿ ನಿಂತಿದ್ದ. ಈ ವೇಳೆ ಆಯತಪ್ಪಿ 70 ರಿಂದ 80 ಅಡಿ ಎತ್ತರದಿಂದ ಹೇಮಾವತಿ ನದಿಗೆ ಬಿದ್ದಿದ್ದಾನೆ. ಇದನ್ನೂ ಓದಿ: 3 ವರ್ಷದ ಹಿಂದೆ ನಡೆದ ಪರಿಷತ್ ಚುನಾವಣೆ | ಕೈ ಅಭ್ಯರ್ಥಿಗೆ 6 ಮತಗಳ ಸೋಲು – ಮರು ಮತ ಎಣಿಕೆಗೆ ಹೈಕೋರ್ಟ್ ಸೂಚನೆ
ಹೇಮಾವತಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಕಡಿಮೆ ಇದ್ದಿದ್ದರಿಂದ ಬಂಡೆ ಹಿಡಿದು ಮುಜಾಮಿಲ್ ಕಿರುಚಾಡುತ್ತಿದ್ದ. ಮುಜಾಮಿಲ್ ಕಿರುಚಾಟ ಕೇಳಿದ ಸ್ಥಳೀಯರು ನದಿಗೆ ಇಳಿದು ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಮುಜಾಮಿಲ್ ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: Kumbh Mela Stampede | ಇಂದು ಸಂಜೆ ದೆಹಲಿಯಿಂದ ಬೆಳಗಾವಿಗೆ ಬರಲಿದೆ ನಾಲ್ವರ ಶವ