ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ (Bengaluru to Mangaluru) ತೆರಳುತ್ತಿದ್ದ ಖಾಸಗಿ ಬಸ್ (Private Bus) ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ.
ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನುವನ್ನು (23) ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ.
ಶಾಂತಿಗ್ರಾಮ ಬಳಿ ರಸ್ತೆ ಬದಿ ಜೀಪ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಿದಾಗ ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಮನು ಯತ್ನಿಸಿದ್ದಾನೆ.
ಈ ಸಂದರ್ಭದಲ್ಲಿ ಹಾಸನ ನಗರಠಾಣೆ ಇನ್ಸ್‌ಪೆಕ್ಟರ್ ಮೋಹನ್‌ಕೃಷ್ಣ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಸಬ್‌ಇನ್ಸ್‌ಪೆಕ್ಟರ್ ಕುಮಾರ್ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ!
ಹಾಸನದಲ್ಲಿ ಪುಡಿ ರೌಡಿಯ ಕಾಟ | ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ https://t.co/jRCrPhpUqh…
ಬಸ್ಸಿಗೆ ಹೀಗೆ ಆದರೆ ಇನ್ನೂ ಕಾರು, ಬೈಕಿನಂತ ವಾಹನದಲ್ಲಿ ಪ್ರಯಾಣ ಮಾಡುವವರು ಏನು ಮಾಡಬೇಕು? – ಪೊಲೀಸರಿಗೆ ನೆಟ್ಟಿಗರ ಪ್ರಶ್ನೆ #Hassana #Bengaluru #Mangaluru #Bus #Police pic.twitter.com/v2AFGWv9Ib
— PublicTV (@publictvnews) January 30, 2025
ಬುಧವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಕೆಎ 51 ಎಂವಿ 8912 ನಂಬರ್‌ನ ಸ್ವಿಫ್ಟ್ ಕಾರನ್ನು ಬಸ್ಸಿನ ಮುಂದೆ ಮನು ಅಡ್ಡ ಹಾಕಿ ನಿಲ್ಲಿಸಿದ್ದ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದ. ಪುಡಿ ರೌಡಿ ಮನುವಿನ ಹುಚ್ಚಾಟ ಬಸ್ಸಿನಲ್ಲಿದ್ದವರ ಮೊಬೈಲಿನಲ್ಲಿ ಸೆರೆಯಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದಂತೆ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಇದನ್ನೂ ಓದಿ: ತನ್ನನ್ನು ಮೋದಿ ಕೈಗೊಂಬೆ ಎಂದ ಡೆಮಾಕ್ರಟಿಕ್ ಸಂಸದರ ವಿರುದ್ಧ US ಗುಪ್ತಚರ ವಿಭಾಗದ ಬಾಸ್ ಕೆಂಡಾಮಂಡಲ
ಬಸ್ಸಿಗೆ ಹೀಗೆ ಆದರೆ ಇನ್ನೂ ಕಾರು, ಬೈಕಿನಂತ ವಾಹನದಲ್ಲಿ ಪ್ರಯಾಣ ಮಾಡುವವರು ಏನು ಮಾಡಬೇಕು ಎಂದು ನೆಟ್ಟಿಗರು ಪೊಲೀಸರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದರು.