ಧರ್ಮ ಅಧರ್ಮಗಳ ಸಂಘರ್ಷದಲ್ಲಿ ಕೊನೆಗೆ ಧರ್ಮಕ್ಕೆ ಗೆಲುವು: ಕಾಶಿಯಲ್ಲಿ ಪವಿತ್ರಾ ಗೌಡ

Public TV
1 Min Read
pavithra gowda

ಟಿ ಪವಿತ್ರಾ ಗೌಡ (Pavithra Gowda) ಅವರು ಹೆಚ್ಚೆಚ್ಚು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಪ್ರಯಾಗ್‌ರಾಜ್‌ನಿಂದ ಪವಿತ್ರಾ ಈಗ ಕಾಶಿಗೆ ಭೇಟಿ ನೀಡಿದ್ದಾರೆ. ಧರ್ಮ ಅಧರ್ಮಗಳ ಸಂಘರ್ಷದಲ್ಲಿ ಕೊನೆಗೆ ಧರ್ಮಕ್ಕೆ ಗೆಲುವು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಕಾಶಿಯಲ್ಲಿ ನಟಿ ನೋವು ತೋಡಿಕೊಂಡಿದ್ದಾರೆ. ಇದನ್ನೂ ಓದಿ:ದೇಸಿ ಗರ್ಲ್ ಈಗ ದುಬಾರಿ- ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ

ಧರ್ಮ ಅಧರ್ಮಗಳ ಸಂಘರ್ಷದಲ್ಲಿ ಗೆದ್ದದ್ದು ಧರ್ಮವೇ. ಮೊದಮೊದಲು ಅಧರ್ಮಕ್ಕೆ ಜಯ ಸಿಕ್ಕಿರಬಹುದು. ಆದರೆ ಕೊನೆಗೆ ಗೆಲುವಾಗುವುದು ಧರ್ಮಕ್ಕೆ ಎಂದು ನಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಿಗೆ ನನ್ನ ವಂದನೆಗಳು. ಕೇವಲ ಕೆಲವು ಮಾಧ್ಯಮದವರ ಅಮಾನವೀಯ ಮಾತುಗಳು ಹಾಗೂ ಕೆಲ ವಿಕೃತ ಮನಸ್ಕರ ಕಾಮೆಂಟ್ ಬೇಸರ ತಂದಿದೆ. ಕಾಲಾಯ ತಸ್ಮೈ ನಮಃ ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನೂ ರೆಡ್ ಕಾರ್ಪೆಟ್ ಸ್ಟುಡಿಯೋ ಡಿಸೈನರ್ ಬೊಟಿಕ್ ರೀ ಲಾಂಚ್ ಮಾಡಲು ಪವಿತ್ರಾ ತಯಾರಿ ನಡೆಸುತ್ತಿದ್ದಾರೆ.

Share This Article