ಚುನಾವಣಾ ಆಯೋಗ ಬಿಜೆಪಿಗೆ ಶರಣಾಗಿದೆ: ಕೇಜ್ರಿವಾಲ್‌ ವಾಗ್ದಾಳಿ

Public TV
1 Min Read
Arvind Kejriwal 2

ನವದೆಹಲಿ: ದೆಹಲಿ ಚುನಾವಣೆ (Delhi Elections) ಸಮೀಪಿಸುತ್ತಿದ್ದಂತೆ ರಾಜಕೀಯ ಜಟಾಪಟಿ ದಿನೇ ದಿನೇ ಕಾವೇರುತ್ತಿದೆ. ಚುನಾವಣಾ ಆಯೋಗವು ಬಿಜೆಪಿ ಎದುರು ಶರಣಾಗಿದೆ ಎಂದು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ವಾಗ್ದಾಳಿ ನಡೆಸಿದ್ದಾರೆ.

bjp flag

ಭಾರತೀಯ ಚುನಾವಣಾ ಆಯೋಗವನ್ನು ಗುರಿಯಾಗಿಟ್ಟುಕೊಂಡು ದೆಹಲಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ದುಷ್ಕೃತ್ಯದ ವಿರುದ್ಧ ಕಾರ್ಯನಿರ್ವಹಿಸಲು ಆಯೋಗ ವಿಫಲವಾಗಿದೆ. ಇದನ್ನೆಲ್ಲಾ ಗಮನಿಸಿದ್ರೆ ಚುನಾವಣಾ ಆಯೋಗ ಅಸ್ತಿತ್ವದಲ್ಲಿಲ್ಲ ಎಂದು ತೋರುತ್ತದೆ. ಇದೊಂದು ರೀತಿಯಲ್ಲಿ ಬಹಳ ದೊಡ್ಡ ಪ್ರಶ್ನೆಯನ್ನ ಹುಟ್ಟುಹಾಕುತ್ತಿದೆ ಅಂದರು. ಇದನ್ನೂ ಓದಿ: ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಅಗತ್ಯ – ಹೆಚ್‌ಡಿಡಿ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ 

RAJEEV KUMAR 1

ಇದೇ ತಿಂಗಳ ಕೊನೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿವೃತ್ತರಾಗುತ್ತಿದ್ದಾರೆ. ನಿವೃತ್ತಿಯ ನಂತರ ಅವರಿಗೆ ರಾಜ್ಯಪಾಲರ ಹುದ್ದೆ, ರಾಷ್ಟ್ರಪತಿ ಹುದ್ದೆ ನೀಡಬಹುದು. ಹೀಗಾಗಿ ನಾನು ರಾಜೀವ್ ಕುಮಾರ್ ಅವರನ್ನ ಕೈಮುಗಿದು ಕೇಳಿಕೊಳ್ಳುತ್ತೇನೆ. ನಿಮ್ಮ ಕರ್ತವ್ಯವನ್ನ ನಿರ್ವಹಿಸಿ ಯಾವುದೇ ಹುದ್ದೆಯ ದುರಾಸೆಯನ್ನ ಬಿಟ್ಟುಬಿಡಿ ಎಂದು ಮನವಿ ಮಾಡಿದ್ರು.

ನಿಮ್ಮ ವೃತ್ತಿಜೀವನದ ಕೊನೆಯಲ್ಲಿ, ದೇಶವನ್ನು ಮತ್ತು ದೇಶದ ಪ್ರಜಾಪ್ರಭುತ್ವವನ್ನು ನಾಶ ಮಾಡಬೇಡಿ ಎಂದು ನೇರ ವಾಗ್ದಾಳಿ ನಡೆಸಿದ್ರು. ಇದನ್ನೂ ಓದಿ: ಭಾರತದ ಗಡಿಯೊಳಗೆ ಚೀನಾ ಪ್ರವೇಶ ಮಾಡಿರುವುದೇ ʻಮೇಕ್ ಇನ್ ಇಂಡಿಯಾʼ ವೈಫಲ್ಯಕ್ಕೆ ಕಾರಣ: ರಾಗಾ ವಾಗ್ದಾಳಿ

Share This Article