ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ – ಪಕ್ಕದ ಮನೆಯವನಿಂದಲೇ ಹೀನಕೃತ್ಯ

Public TV
1 Min Read
Stop Rape

ಹಾಸನ: ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಎರಡು ಮಕ್ಕಳ ತಂದೆ, ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಬಾಲಕಿಯ ಪಕ್ಕದ ಮನೆಯ ನಿವಾಸಿಯಿಂದಲೇ ಈ ಹೀನಕೃತ್ಯ ನಡೆದಿದೆ. ಮಂಗಳವಾರ ಬಾಲಕಿಯ ಮನೆಯವರು ಸಂಬಂಧಿಕರೊಬ್ಬರ ಬೀಗರ ಔತಣ ಕಾರ್ಯಕ್ರಮಕ್ಕೆ ಹೋಗಿದ್ದರು. ಬಾಲಕಿ ಒಬ್ಬಳೇ ಮನೆಯಲ್ಲಿದ್ದಳು. ಇದೇ ಸಮಯಕ್ಕಾಗಿ ಕಾದಿದ್ದ ಆರೋಪಿ, ಚಾಕೊಲೆಟ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಸಂಜೆ ವೇಳೆಗೆ ಪೋಷಕರು ಬಂದಾಗ ಬಾಲಕಿಯ ವರ್ತನೆ ಬದಲಾಗಿತ್ತು. ಒಂದೇ ಸಮನೆ ಅಳಲಾರಂಭಿಸಿದ್ದಾಳೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯರಿಗೆ ತೋರಿಸಿದಾಗ ಅತ್ಯಾಚಾರ ನಡೆದಿದೆ ಎಂಬುದು ದೃಢವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಆರೋಪಿ ಮನೆಯ ಹಿಂಬಾಗಿಲಿನಿಂದ ಪರಾರಿಯಾಗಿ ತಲೆ ಮರೆಸಿಕೊಂಡಿದ್ದಾನೆ. ಬಾಲಕಿ ಪೋಷಕರು ಹಳೆಬೀಡು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Share This Article