ಬೆಂಗಳೂರು: ಪದೇ ಪದೇ ಗ್ಯಾಸ್ ಸೋರಿಕೆಯಿಂದ (Gas Leakage) ಅಗ್ನಿ ಅವಘಡದಲ್ಲಿ ಸಾಕಷ್ಟು ಸಾವು ನೋವುಗಳ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತಿದೆ.
ಇದೇ ಮೊದಲ ಬಾರಿಗೆ ಗ್ಯಾಸ್ ಕಂಪನಿ ಹಾಗೂ ಏಜೆನ್ಸಿ (Gas Agency) ವಿರುದ್ಧ ಬೇಗೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಗ್ಯಾಸ್ ಲೀಕ್, ಗ್ಯಾಸ್ ಸ್ಫೋಟಕ್ಕೆ ಯಾವುದೇ ಕೇಸ್ ದಾಖಲಾಗುತ್ತಿರಲಿಲ್ಲ. ಇದೀಗ ಪ್ರೈವೆಟ್ ಗ್ಯಾಸ್ ಕಂಪನಿ ಮಾಲೀಕ ಚೋಟಾ ಸಿಕಂದರ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಯೋಗ್ಯ ಅಂದ್ರೆ ಜನರ ವೋಟು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು
ಎಲ್‌ಎಲ್‌ಬಿ ವಿದ್ಯಾರ್ಥಿನಿ ಜಾಹ್ನವಿ ನೀಡಿದ ದೂರಿನ ಮೇಲೆ ಬೇಗೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಾಹ್ನವಿ ತಂದೆ ಪಶ್ಚಿಮ ಬಂಗಾಳ ಮೂಲದ ನೇತ್ಯಾ ನಯ್ಯ ಎಂಬುವರಿಗೆ ಮನೆ ಬಾಡಿಗೆಗೆ ಕೊಟ್ಟಿದ್ರು. ಇದೇ ತಿಂಗಳ 1ನೇ ತಾರೀಖು ಸಿಲಿಂಡರ್ ಬ್ಲ್ಯಾಸ್ಟ್ ಆಗಿ ನೇತ್ಯಾ ನಯ್ಯ ಹಾಗೂ ಅವರ ಪತ್ನಿ ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ – CBI ತನಿಖೆಗೆ ವಹಿಸಲು ಹೈಕೋರ್ಟ್ ನಕಾರ
ಸಿಲಿಂಡರ್ ಬ್ಲ್ಯಾಸ್ಟ್‌ಗೆ ಖಾಸಗಿ ಪ್ರೈವೆಟ್ ಸಿಲಿಂಡರ್ ಕಂಪನಿ ಏಜೆನ್ಸಿಯೇ ಕಾರಣ. ಹೀಗಾಗಿ ಮಾಲೀಕ ಚೋಟಾ ಸಿಕಂದರ್ ಡಿಸ್ಟ್ರಿಬ್ಯೂಟರ್ ನೈಸ್ ಎಸ್‌ಕೆಎಲ್ ಮೇಲೆ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ದೂರಿನನ್ವಯ ಇದೀ ಬಿಎನ್‌ಎಸ್ 125(ಎ), 287, 324(2) ಅಡಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: RBI: 5 ವರ್ಷಗಳ ಬಳಿಕ ರೆಪೊ ದರ ಕಡಿತ ಮಾಡಿದ ಆರ್‌ಬಿಐ