ಗಾಂಧಿನಗರ: ಮರಳು ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ರಸ್ತೆಬದಿ ಕೆಲಸ ಮಾಡುತ್ತಿದ್ದ ಮೂವರು ಮಹಿಳೆಯರು ಹಾಗೂ ಒಂದು ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಗುಜರಾತ್‌ನ (Gujarat) ಬನಸ್ಕಂತ (Banaskantha) ಜಿಲ್ಲೆಯ ಥರಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಿರಿದಾದ ತಿರುವಿನಲ್ಲಿ ಲಾರಿ (Lorry) ಚಾಲಕ ವಾಹನ ಚಲಾಯಿಸಲು ಪ್ರಯತ್ನಿಸಿದ ವೇಳೆ ಲಾರಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್ ಮೈದಾನದಲ್ಲಿ ಫೀಲ್ಡಿಂಗ್ ವೇಳೆ ಹಣೆಗೆ ಬಡಿದ ಚೆಂಡು – ರಕ್ತ ಸೋರುತ್ತಲೇ ಹೊರನಡೆದ ರಚಿನ್ ರವೀಂದ್ರ
ಘಟನೆಯ ನಂತರ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಜೆಸಿಬಿ ಬಳಸಿ ಮೃತರ ಶವಗಳನ್ನು ಹೊರತೆಗೆಯಲಾಗಿದೆ. ಮೃತರು ದಾಹೋದ್ ಜಿಲ್ಲೆಯವರಾಗಿದ್ದು, ಕೆಲಸಕ್ಕಾಗಿ ಬಂದಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕಾಶಿ | ನದಿಸ್ನಾನ ಮಾಡುವಾಗ ಮುಳುಗಿ ಬಾಗಲಕೋಟೆಯ ವ್ಯಕ್ತಿ ಸಾವು