ನಿಮಿಷಾಂಭ ದೇವಸ್ಥಾನದಲ್ಲಿ ಮಾಘ ಹುಣ್ಣಿಮೆ ಸಂಭ್ರಮ – ಕಾವೇರಿ ನದಿಯಲ್ಲಿ ಪುಣ್ಯಸ್ನಾನ

Public TV
1 Min Read
Magh Purnima Nimishamba Temple

ಮಂಡ್ಯ: ಮಾಘ ಹುಣ್ಣಿಮೆ ಹಿನ್ನೆಲೆಯಲ್ಲಿ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ (Nimishamba Temple) ಅಪಾರ ಪ್ರಮಾಣದ ಭಕ್ತರ ದಂಡು ಹರಿದು ಬರುತ್ತಿದೆ. ಇಂದು ಕಾವೇರಿ ನದಿಯಲ್ಲಿ (Cauvery River) ಮಾಘ ಸ್ನಾನ ಮಾಡಿ ನಿಮಿಷಾಂಭ ದೇವಿ ದರ್ಶನ ಮಾಡಿದರೆ ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿಯಿದೆ. ಹೀಗಾಗಿ ಮಧ್ಯರಾತ್ರಿಯಿಂದಲೇ ಕಾವೇರಿಯಲ್ಲಿ ಸಹಸ್ರಾರು ಭಕ್ತರು ಮಿಂದೇಳುತ್ತಿದ್ದಾರೆ.

ಮಂಡ್ಯ ಮಾತ್ರವಲ್ಲದೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತರ ಆಗಮಿಸುತ್ತಿದ್ದು, ಕಾವೇರಿ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ನಿಮಿಷಾಂಭೆಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಮಧ್ಯರಾತ್ರಿ 12 ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ಆರಂಭವಾಗಿದ್ದು, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಅಭಿಷೇಕ ನೇರವೇರಿದೆ. ಇದನ್ನೂ ಓದಿ: ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹತ್ಯೆ

ಮುಂಜಾನೆ 3 ಗಂಟೆಯಿಂದ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಿದ್ದು, ಇದೇ ಮೊದಲ ಬಾರಿಗೆ ನಿಮಿಷಾಂಭ ರಥೋತ್ಸವ ಜರುಗಿದೆ. ಕಾವೇರಿ ಸ್ನಾನಕ್ಕೆ ಆಗಮಿಸಲಿರುವ ಭಕ್ತರಿಗೆ ದಿನವಿಡೀ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: 2025ರಲ್ಲಿ ಹಜ್‌ ಯಾತ್ರೆಗೆ ಮಕ್ಕಳು ನಿಷೇಧ – ಕಾರಣ ಏನು ಗೊತ್ತಾ?

Share This Article