ಪ್ರಯಾಗ್‌ರಾಜ್: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Maha Kumbh Mela) ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಬುಧವಾರ ಪುಣ್ಯಸ್ನಾನ ಮಾಡಿದರು.
ವಿಜಯೇಂದ್ರ ಬದಲಾವಣೆ ಓಡಾಟದ ಮಧ್ಯೆಯೂ ರಮೇಶ್ ಜಾರಕಿಹೊಳಿ ಪ್ರಯಾಗ್‌ರಾಜ್‌ಗೆ ಭೇಟಿ ನೀಡಿದ್ದಾರೆ. ಮೊನ್ನೆಯಷ್ಟೇ ರಾಜಕೀಯ ಬದ್ಧ ವೈರಿ ಡಿ.ಕೆ ಶಿವಕುಮಾರ್ ಕೂಡ ಪ್ರಯಾಗ್‌ರಾಜ್‌ಗೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಕೂಡ ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ, ಪುಣ್ಯಸ್ನಾನ ಮಾಡಿದರು.
144 ವರ್ಷಗಳ ಬಳಿಕ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಜನವರಿ 13 ರಂದು ಆರಂಭವಾದ ಈ ಮಹಾ ಕುಂಭಮೇಳವು ಫೆಬ್ರವರಿ 26ರವರೆಗೂ ನಡೆಯಲಿದೆ. ಈಗಾಗಲೇ ಕೋಟ್ಯಂತರ ಭಕ್ತರು ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ.
ದೇಶ-ವಿದೇಶದಿಂದ ಆಗಮಿಸುತ್ತಿರುವ ಭಕ್ತರು ಜಗತ್ಪ್ರಸಿದ್ಧ ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅನೇಕ ಗಣ್ಯರು ಸಹ ಮಹಾ ಕುಂಭಮೇಳಕ್ಕೆ ಆಗಮಿಸಿ ತ್ರಿವೇಣಿಯಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಫೆ. 26ರ ವರೆಗೂ ಮಹಾ ಕುಂಭಮೇಳಕ್ಕೆ ಭಕ್ತರು ಆಗಮಿಸಲಿದ್ದಾರೆ.