ರಾಯಚೂರು: ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದರಿಂದ ಜಿಲ್ಲೆಯಲ್ಲಿರುವ ಸಾಲ ಬಾಧಿತರು ಸಿಎಂ ಹಾಗೂ ಸಚಿವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ನೆರವೇರಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ತಂದ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವ ಹಿನ್ನೆಲೆ ರಾಯಚೂರಿನ (Raichuru) ಡಿಸಿ ಕಚೇರಿ ಎದುರು ಮೈಕ್ರೋ ಫೈನಾನ್ಸ್ ಸಾಲ ಬಾಧಿತರು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.ಇದನ್ನೂ ಓದಿ: ಮನಸಿನೊಡತಿ ಜೊತೆಗಿನ ಪ್ರತಿ ಕ್ಷಣವೂ ಪ್ರೇಮಿಗಳ ದಿನವೇ!
ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸಣ್ಣನೀರಾವರಿ ಸಚಿವ ಎನ್.ಎಸ್ ಬೋಸರಾಜು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಭಾವಚಿತ್ರದ ಬ್ಯಾನರ್‌ಗೆ ಹಾಲಿನ ಅಭಿಷೇಕ ಮಾಡಿ, ಕಿರುಕುಳಕ್ಕೊಳಗಾದ ಕುಟುಂಬಗಳು ಹಾಗೂ ನೊಂದ ಮಹಿಳೆಯರು ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಆತ್ಮಹತ್ಯೆಗೆ ಶರಣಾದ ಕುಟುಂಬಸ್ಥರ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಇದನ್ನೂ ಓದಿ: 389 ರೂ. ಕೊಟ್ರೆ ಪ್ರೇಮಿಗಳ ದಿನಕ್ಕೆ ಬಾಡಿಗೆ ಬಾಯ್ ಫ್ರೆಂಡ್ – ಏನಿದು ಆಫರ್?