ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ – ಆರೋಪಿಗೆ 20 ವರ್ಷ ಜೈಲು, 45 ಸಾವಿರ ದಂಡ

Public TV
1 Min Read
kolar pocso case

ಕೋಲಾರ: ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗೆ 20 ವರ್ಷ ಜೈಲಿಗೆ ಶಿಕ್ಷೆ ಹಾಗೂ 45 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಕೋಲಾರ ಪೋಕ್ಸೊ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಮಾರುತಿ ನಗರದ ಕಾರು ಚಾಲಕ ಗಂಗಾಧರ್ ಎಂಬ ಯುವಕ ಶಿಕ್ಷೆಗೆ ಒಳಗಾಗಿದ್ದಾನೆ.

ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದ. 2023ರ ಮೇ 17ರಂದು ನೀಡಿದ ದೂರಿನ ಮೇರೆಗೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬೇತಮಂಗಲ ಠಾಣೆಯ ವೃತ್ತ ನಿರೀಕ್ಷಕರು ಆರೋಪಿಯ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಬಿ.ಪ್ರಸಾದ್ ಅವರಿಂದ ಅಪರಾಧಿಗೆ ಶಿಕ್ಷೆ ವಿಧಿಸಲಾಗಿದೆ. 20 ವರ್ಷ ಜೈಲು ಶಿಕ್ಷೆ ಹಾಗೂ 45 ಸಾವಿರ ದಂಡ ಹಾಕಲಾಗಿದೆ. ಜೊತೆಗೆ ನೊಂದ ಬಾಲಕಿಗೆ ಸರ್ಕಾರದ ವತಿಯಿಂದ 4 ಲಕ್ಷ ಪರಿಹಾರ ನೀಡುವಂತೆ ನಿರ್ದೇಶನ ನೀಡಿದೆ.

Share This Article