ಮೈಕ್ರೋ ಫೈನಾನ್ಸ್‌ನಿಂದ ಮುಂದುವರಿದ ಕಿರುಕುಳ – ಗ್ರಾಮವನ್ನೇ ತೊರೆದ 7-8 ಕುಟುಂಬಗಳು

Public TV
1 Min Read
Micro Finance 2

ದಾವಣಗೆರೆ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಸಿಬ್ಬಂದಿ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಗೊಳಿಸಿದೆ. ಅಲ್ಲದೇ ಅಧಿಕ ಬಡ್ಡಿ ಪಡೆಯುವುದನ್ನ ತಡೆಯುವ ವಿಧೇಯಕ್ಕೆ ತಿದ್ದುಪಡಿ ತರಲು ತಯಾರಿ ನಡೆಸಿದೆ. ಹೀಗಿದ್ದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಕಿರುಕುಳ ಮುಂದುವರಿದಿದೆ.

Micro Finance 33

ಕಿರುಕುಳದಿಂದ ಬೇಸತ್ತ ಏಳೆಂಟು ಕುಟುಂಬಗಳು ಊರು ಬಿಟ್ಟಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ತಾಲೂಕಿನ ಶಿವಗಂಗನಾಳ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಹಿಂದೂ ನೌಕರರು ಉಪವಾಸ ಆಚರಣೆಗೆ ಮನವಿ ಮಾಡಿದ್ರೆ ಸರ್ಕಾರಿ ಕಚೇರಿಗಳೇ ಖಾಲಿ ಖಾಲಿ – ಮುತಾಲಿಕ್

Micro Finance 1

ಗ್ರಾಮದ ಹಲವು ಕುಟುಂಬಗಳಿಗೆ ಸಾಲದ ಕಂತು ಪಾವತಿಸುವಂತೆ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಪದೇ ಪದೇ ಕಿರುಕುಳ ನೀಡುತ್ತಾ ಬಂದಿದ್ದಾರೆ. ನಿಮಗೆ ಸಿಬಿಲ್ ಸ್ಕೋರ್ ಬರದಿದ್ದರೆ ಎಲ್ಲೂ ನಯಾ ಪೈಸೆ ಸಾಲ ಹುಟ್ಟಲ್ಲ ಅಂತ ಹೆದರಿಸಿದ್ದಾರೆ. ಕೆಲವರನ್ನ ಪೊಲೀಸ್‌ ಠಾಣೆಗೆ ಕರೆಸಿ ಬೆದರಿಸುವಂತೆ ಮಾಡಿದ್ದಾರೆ. ಯಾರ ಕೈ-ಕಾಲು ಹಿಡಿದಾದರೂ ಸಾಲ ತಂದುಕೊಡು ಅಂತ ಮಾನಸಿಕ ಹಿಂಸೆ ನೀಡಿದ್ದಾರೆ.

ಇದರಿಂದ ಬೇಸತ್ತ ಶಿವಗಂಗನಾಳ ಗ್ರಾಮದ ಕುಟುಂಬಗಳು ಮನೆಗೆ ಬೀಗ ಹಾಕಿಕೊಂಡು ಊರು ಬಿಟ್ಟಿವೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೈಕ್ರೋ ಫೈನಾನ್ಸ್‌ನಿಂದ ಸಾಲ ಪಡೆದ ಕುಟುಂಬಳದ್ದೂ ಇದೇ ಪರಿಸ್ಥಿತಿ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಹಬ್ಬದ ಸಂಭ್ರಮದಲ್ಲಿ ಮಾರಕಾಸ್ತ್ರ ಹಿಡಿದು ಮಧ್ಯರಾತ್ರಿ ವ್ಹೀಲಿಂಗ್ ಮಾಡಿದ್ದ ಪುಂಡರು ಅರೆಸ್ಟ್

Share This Article