Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೆಲಂಗಾಣದ ಶ್ರೀಶೈಲಂ ಎಡದಂಡೆ ಕಾಲುವೆ ಮೇಲ್ಛಾವಣಿ ಕುಸಿತ – 8 ಮಂದಿ ಸಿಲುಕಿರುವ ಶಂಕೆ, 48 ಕಾರ್ಮಿಕರ ರಕ್ಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತೆಲಂಗಾಣದ ಶ್ರೀಶೈಲಂ ಎಡದಂಡೆ ಕಾಲುವೆ ಮೇಲ್ಛಾವಣಿ ಕುಸಿತ – 8 ಮಂದಿ ಸಿಲುಕಿರುವ ಶಂಕೆ, 48 ಕಾರ್ಮಿಕರ ರಕ್ಷಣೆ

Latest

ತೆಲಂಗಾಣದ ಶ್ರೀಶೈಲಂ ಎಡದಂಡೆ ಕಾಲುವೆ ಮೇಲ್ಛಾವಣಿ ಕುಸಿತ – 8 ಮಂದಿ ಸಿಲುಕಿರುವ ಶಂಕೆ, 48 ಕಾರ್ಮಿಕರ ರಕ್ಷಣೆ

Public TV
Last updated: February 22, 2025 4:21 pm
Public TV
Share
1 Min Read
Tunnel Collapses
SHARE

ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (SLBC) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು (Tunnel Collapses) ಕನಿಷ್ಠ 8 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಲಾಗಿದೆ.

ನಾಗರ್‌ಕರ್ನೂಲ್ (Nagarkurnool) ಜಿಲ್ಲೆಯ ಅಮ್ರಾಬಾದ್‌ನಿಂದ ಸುರಂಗ ನಿರ್ಮಾಣವಾಗುತ್ತಿದೆ. ದೋಮಲಪೆಂಟಾ ಬಳಿಯ ಶ್ರೀಶೈಲಂ ಅಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿದೆ. ಈ ಪೈಕಿ ಮೂವರು ತಪ್ಪಿಸಿಕೊಂಡಿದ್ದು, ಕನಿಷ್ಠ 8 ಮಂದಿ ಸುರಂಗದಲ್ಲಿ ಸಿಲುಕಿರುವ ಶಂಕೆಯಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ವರದಿಗಳು ತಿಳಿಸಿವೆ.

Tunnel Collapses 2

ಸದ್ಯ ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಬಾಡಿಗೆ, ಲೀಸ್‌ ಪಡೆಯುವ ಮುನ್ನ ಎಚ್ಚರವಾಗಿರಿ – 50ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂ. ವಂಚನೆ

ಘಟನೆ ಕುರಿತು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ (Revanth Reddy) ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಆದ್ರೆ ಈಗಲೇ ನಿಖರವಾದ ಅಂಕಿ-ಅಂಶ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳ ಅಂತ್ಯಕ್ಕೆ 4 ದಿನ ಬಾಕಿ – ಮಹಾಶಿವರಾತ್ರಿ ಹಿನ್ನೆಲೆ ಪುಣ್ಯಸ್ನಾನಕ್ಕೆ ಆಗಮಿಸುತ್ತಿರುವ ಭಕ್ತಕೋಟಿ

ಜೊತೆಗೆ ಜಿಲ್ಲಾಧಿಕಾರಿ, ಎಸ್ಪಿ, ಅಗ್ನಿಶಾಮಕ ದಳ, ಜಲಮಂಡಳಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಸಿಎಂ ಸೂಚನೆ ಬೆನ್ನಲ್ಲೇ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ಹಾಗೂ ನೀರಾವರಿ ಇಲಾಖೆಯ ಇತರ ಅಧಿಕಾರಿಗಳು ವಿಶೇಷ ಹೆಲಿಕಾಪ್ಟರ್‌ನಲ್ಲಿ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ಕಿಡಿಗೇಡಿಗಳು ಒಣಹುಲ್ಲಿಗೆ ಬೆಂಕಿ ಹಚ್ಚಿದ್ದರಿಂದ ಚಾಮುಂಡಿಬೆಟ್ಟದಲ್ಲಿ 35 ಎಕ್ರೆ ಅರಣ್ಯ ನಾಶವಾಗಿದೆ: ಡಿಸಿಎಫ್

TAGGED:NagarkurnoolRevanth ReddySLBCtelanganaTunnel Collapsesಕಾರ್ಮಿಕರುತೆಲಂಗಾಣಶ್ರೀಶೈಲಂ ಎಡದಂಡೆ ಕಾಲುವೆಸುರಂಗ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Rain in Raichuru
Districts

ರಾಯಚೂರಿನಲ್ಲಿ ವರುಣಾರ್ಭಟ – ಆಲಿಕಲ್ಲು ಮಳೆಗೆ ತಂಪಾದ ಬಿಸಿಲನಾಡು

Public TV
By Public TV
2 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
25 minutes ago
MC Sudhakar
Bengaluru City

ಬಿ.ಎಡ್ ಕಾಲೇಜುಗಳ ಶುಲ್ಕ ಶೀಘ್ರವೇ ಹೆಚ್ಚಳ: ಡಾ. ಸುಧಾಕರ್

Public TV
By Public TV
29 minutes ago
supreme Court 1
Court

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
60 minutes ago
Sharana Prakash Patil
Bengaluru City

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ ಪ್ರಕಾಶ್ ಪಾಟೀಲ್

Public TV
By Public TV
1 hour ago
Donald Trump RSS
Latest

RSS, RAW ಬ್ಯಾನ್‌ ಮಾಡಿ – ಟ್ರಂಪ್‌ಗೆ ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಶಿಫಾರಸು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?