ಲಾಹೋರ್: ಚಾಂಪಿಯನ್ಸ್ ಟ್ರೋಫಿಯ ಆಸ್ಟ್ರೇಲಿಯಾ ವರ್ಸಸ್ ಇಂಗ್ಲೆಂಡ್ ಪಂದ್ಯಕ್ಕೂ ಮುನ್ನ ಲಾಹೋರ್‌ನಲ್ಲಿ ಭಾರತದ ರಾಷ್ಟ್ರಗೀತೆ (Indian national anthem) ಮೊಳಗಿತು.
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮೆಗಾ ಪಂದ್ಯಕ್ಕೆ ಇನ್ನೂ ಒಂದು ದಿನ ಬಾಕಿ ಇದೆ. ಆದರೆ, ಭಾರತದ ರಾಷ್ಟ್ರಗೀತೆ ‘ಜನ ಗಣ ಮನ’ ಈಗಾಗಲೇ ಪಾಕ್ ನೆಲದಲ್ಲಿ ಮೊಳಗಿದೆ.
Yeh kya tha benstokes
Australia ki jagah india ka anthem laga diya???? pic.twitter.com/CjSKKcxEGY
— NOYAAN. (@KoitohoonAlt) February 22, 2025
ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಗ್ರೂಪ್ ಬಿ ಪಂದ್ಯ ನಡೆಯುತ್ತಿದೆ. ಮೊದಲು ಇಂಗ್ಲೆಂಡ್‌ನ ರಾಷ್ಟ್ರಗೀತೆ ನುಡಿಸಲಾಯಿತು. ನಂತರ ಆಸ್ಟ್ರೇಲಿಯಾದ ರಾಷ್ಟ್ರಗೀತೆ ಬದಲಿಗೆ ಭಾರತದ ರಾಷ್ಟ್ರಗೀತೆ ‘ಭಾರತ್ ಭಾಗ್ಯ ವಿಧಾತ’ ನುಡಿಸಲಾಯಿತು.
ತಕ್ಷಣ ಆದನ್ನು ಶೀಘ್ರದಲ್ಲೇ ಸರಿಪಡಿಸಲಾಯಿತು. ಆದರೆ, ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟ್ರೋಲ್‌ಗೆ ಒಳಗಾಗಿದೆ.