ರಾಜ್ಯಸಭಾ ಸಂಸದನಿಗೆ ವಿಧಾನಸಭೆ ಉಪ ಚುನಾವಣೆಗೆ ಟಿಕೆಟ್ – ಪಂಜಾಬ್‌ನಿಂದ ಸಂಸತ್‌ಗೆ ಕೇಜ್ರಿವಾಲ್?

Public TV
1 Min Read
Arvind Kejriwal 2

ಲುಧಿಯಾನ: ಆಮ್ ಆದ್ಮಿ ಪಕ್ಷ ಪಂಜಾಬ್‌ನ ಲುಧಿಯಾನ ಪಶ್ಚಿಮ ವಿಧಾನಸಭಾ ಉಪಚುನಾವಣೆಗೆ ತನ್ನ ರಾಜ್ಯಸಭಾ ಸಂಸದ ಸಂಜೀವ್ ಅರೋರಾ (Sanjeev Arora) ಅವರನ್ನು ಕಣಕ್ಕಿಳಿಸಿದೆ. ಈ ಬೆಳವಣಿಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ರಾಜ್ಯಸಭೆ ಪ್ರವೇಶದ ವದಂತಿಗೆ ಇನ್ನಷ್ಟು ಪುಷ್ಠಿ ನೀಡಿದೆ.

AAP delhi polls

ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಈ ವದಂತಿಯನ್ನು ಪಕ್ಷ ತಳ್ಳಿ ಹಾಕಿತ್ತು. ಆದರೀಗ ರಾಜ್ಯಸಭಾ ಸಂಸದ ಸಂಜೀವ್ ಅರೋರಾ ಅವರನ್ನು ಉಪ ಚುನಾವಣೆಗೆ ಕಣಕ್ಕಿಳಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್‌ಎಫ್

ಚುನಾವಣಾ ಆಯೋಗವು ಲುಧಿಯಾನ ಪಶ್ಚಿಮ (Ludhiana West) ಉಪಚುನಾವಣೆಯ ದಿನಾಂಕಗಳನ್ನು ಇನ್ನೂ ಘೋಷಿಸಿಲ್ಲ. ನವೆಂಬರ್‌ನಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ – ಸಚಿವ ಜಮೀರ್ ಬ್ಯಾಟಿಂಗ್‌

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ನಾಯಕ ನೀಲ್ ಗರ್ಗ್, ಸಂಜೀವ್ ಅರೋರಾ ಅವರ ಉತ್ತಮ ಕೆಲಸಗಳನ್ನು ಪರಿಗಣಿಸಿ ಲುಧಿಯಾನ ಪಶ್ಚಿಮ ಉಪಚುನಾವಣೆಗೆ ಟಿಕೆಟ್ ನೀಡಲಾಗಿದೆ. ಕೇಜ್ರಿವಾಲ್ ರಾಜ್ಯಸಭೆಗೆ ಹೋಗುತ್ತಾರೆ ಎಂಬ ಊಹಾಪೋಹಗಳು ಸುಳ್ಳು ಮತ್ತು ಬಿಜೆಪಿ ಕಾರ್ಖಾನೆಯಿಂದ ಬಂದಿವೆ.

ನಾವು ಮೊದಲು ಉಪಚುನಾವಣೆ ಗಮನ ಹರಿಸುತ್ತೇವೆ. ಬಳಿಕ ಮತ್ತು ನಂತರ ರಾಜ್ಯಸಭೆಯತ್ತ ಕೇಂದ್ರೀಕರಿಸುತ್ತೇವೆ ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಇಂತಹ ವದಂತಿಗಳನ್ನು ಹರಡುತ್ತಿವೆ. ಇಂತಹ ವದಂತಿಗಳಾಗಿ ನಾನು ತಿರಸ್ಕರಿಸುತ್ತೇನೆ ಎಂದು ನೀಲ್ ಗರ್ಗ್ ಹೇಳಿದರು. ಇದನ್ನೂ ಓದಿ: ಪತ್ನಿ ಕೊಲೆ ಮಾಡಿ ಅಂತ್ಯಕ್ರಿಯೆ – ಕೊನೆ ಕ್ಷಣದಲ್ಲಿ ಎಂಟ್ರಿ ಕೊಟ್ಟ ಪೊಲೀಸರು, ಅರೆಸ್ಟ್ ಆದ ಗಂಡ

Share This Article