ಸೆಬಿ ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ ನೇಮಕ

Public TV
1 Min Read
Tuhin Kanta Pandey

ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (SEBI) ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ (Tuhin Kanta Pandey) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಸಂಪುಟದ ನೇಮಕಾತಿ ಸಮಿತಿಯ ಅನುಮೋದನೆಯ ನಂತರ, ಹಣಕಾಸು ಕಾರ್ಯದರ್ಶಿ ಪಾಂಡೆ ಅವರು ಮೂರು ವರ್ಷಗಳ ಅವಧಿಗೆ ಸೆಬಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.

SEBI

ಸೆಬಿ ಹಾಲಿ ಮುಖ್ಯಸ್ಥರಾಗಿರುವ ಮಾಧಬಿ ಪುರಿ ಬುಚ್ ಅವರ ಅಧಿಕಾರಾವಧಿ ಮಾ.1 ರಂದು ಕೊನೆಗೊಳ್ಳಲಿದೆ. ಇವರು 2022ರ ಮಾ.2 ರಂದು ಮೊದಲ ಮಹಿಳಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಪಾಂಡೆ ಅವರು ಸಾರ್ವಜನಿಕ ಉದ್ಯಮಗಳ ಇಲಾಖೆ (DPE), ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ (DIPAM)ಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. DIPAM ಮತ್ತು DPE ಎರಡೂ ಹಣಕಾಸು ಸಚಿವಾಲಯದ ಅಡಿಯಲ್ಲಿದ್ದವು.

2024 ರ ಸೆಪ್ಟೆಂಬರ್‌ ತಿಂಗಳಲ್ಲಿ ಭಾರತದ ಹಣಕಾಸು ಕಾರ್ಯದರ್ಶಿಯಾಗುವ ಮೊದಲು, ತುಹಿನ್ ಪಾಂಡೆ ಅನೇಕ ಇಲಾಖೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2025ರ ಜನವರಿಯಲ್ಲಿ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

Share This Article