ಮೆಟ್ರೋ ದರ ಇಳಿಕೆ | ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮಕ್ಕೆ ಒತ್ತಾಯ: ಸಿದ್ದರಾಮಯ್ಯ

Public TV
1 Min Read
siddaramaiah and bjp mlas bengaluru

ಬೆಂಗಳೂರು: ಸಾರ್ವಜನಿಕರಿಗೆ ಹೊರೆಯಾಗದಂತೆ ಮೆಟ್ರೋ ದರ (Namma Metro fares) ಇಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ.

ಬೆಂಗಳೂರು ನಗರದ ಬಿಜೆಪಿ (BJP) ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು. ಮೆಟ್ರೋ ದರ ಮತ್ತಷ್ಟು ಇಳಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ: ಗ್ಯಾರಂಟಿ ಹೊಡೆತಕ್ಕೆ ತತ್ತರ – ದೇವಸ್ಥಾನದ ಹಣಕ್ಕೆ ಕೈ ಹಾಕಿತಾ ಹಿಮಾಚಲ ಸರ್ಕಾರ?

Namma Metro Purple Line

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, ಈಗಾಗಲೇ ಅವೈಜ್ಞಾನಿಕ ದರ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರಕ್ಕೆ, ಮೆಟ್ರೋಗೆ ಪತ್ರ ಬರೆಯಲಾಗಿದೆ. ಅಲ್ಲದೆ ಸಾರ್ವಜನಿಕರಿಗೆ ಹೊರೆಯಾಗದಂತೆ ಮೆಟ್ರೋ ದರ ಇಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮಕ್ಕೆ ಬಿಎಂಆರ್ ಸಿಎಲ್ ಗೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್, ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಸೇರಿದಂತೆ ‌ನಿಯೋಗದಲ್ಲಿ ಬೆಂಗಳೂರಿನ ಬಿಜೆಪಿ ಪಕ್ಷದ ಶಾಸಕರು, ಸಂಸದರು ಉಪಸ್ಥಿತರಿದ್ದರು.

 

Share This Article