ಸ್ವ ಇಚ್ಛೆಯಿಂದ ಗ್ಯಾರಂಟಿ ಬಿಟ್ಟುಕೊಡುವ ಜನರಿಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ: ಹೆಚ್.ಎಂ.ರೇವಣ್ಣ

Public TV
1 Min Read
hm revanna

– ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರು ಹೇಳಿದ್ದೇನು?

ನವದೆಹಲಿ: ಇತ್ತೀಚೆಗೆ ಕಾರವಾರದಲ್ಲಿ ಕೆಲವು ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ, ಅದು ಬಡವರಿಗೆ ತಲುಪಲಿ ಎಂದು ಹೇಳಿದರು. ಇದೇ ರೀತಿ ಸ್ವ ಇಚ್ಛೆಯಿಂದ ಗ್ಯಾರಂಟಿ ಬಿಟ್ಟುಕೊಡುವ ಜನರಿಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹೇಳಿದ್ದಾರೆ‌.

ನವದೆಹಲಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್, ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರಿಗೆ ಮಾಹಿತಿ ನೀಡಿದ್ದೇನೆ ಎಂದಿದ್ದಾರೆ.

ಚುನಾವಣಾ ಪೂರ್ವದಲ್ಲಿ ನಾವು ಜನರಿಗೆ ಗ್ಯಾರಂಟಿ ಜಾರಿ ಮಾಡುವ ಭರವಸೆ ನೀಡಿದ್ದೆವು. ಸರ್ಕಾರ ರಚನೆಯಾದ ಬೆನ್ನಲ್ಲೇ ಮೊದಲ ಸಂಪುಟದಲ್ಲೇ ನಾವು ಗ್ಯಾರಂಟಿ ಜಾರಿ ಮಾಡಿದ್ದೇವೆ. ಎಲ್ಲ ಯೋಜನೆಗಳು ಸರಿಯಾಗಿ ಅನುಷ್ಠಾನಕ್ಕೆ ಬಂದಿವೆ. ಗೃಹಲಕ್ಷ್ಮಿ ಯೋಜನೆ ಅಡಿ ಮೂರು ತಿಂಗಳು ಹಣ ಪಾವತಿ ಆಗಿರಲಿಲ್ಲ. ಈಗ ಅದಕ್ಕೂ ವ್ಯವಸ್ಥೆ ಮಾಡಿದೆ ಎಂದು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುವವರು, ಉಳ್ಳವರು ಮತ್ತು ಬಿಜೆಪಿ ನಾಯಕರು, ಬಡವರಿಗೆ ಬಾಯಿ ಇಲ್ಲ. ಹೀಗಾಗಿ, ಮಾತನಾಡಲ್ಲ. ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿ ಹೆಚ್ಚಿಸಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಮೊದಲು ಗುಜರಾತ್ ಮಾದರಿ ಅಂತಾ ಇದ್ದರು. ಈಗ ಕರ್ನಾಟಕ ಮಾದರಿ ಆಗುತ್ತಿದೆ. ಬ್ಲಡ್ ಮತ್ತು ದುಡ್ಡು ಎರಡೂ ಚಲಾವಣೆಯಲ್ಲಿ ಇದ್ದರೆ ಮಾತ್ರ ಆರೋಗ್ಯಕ್ಕೆ ಒಳ್ಳೆಯದು ಎಂದಿದ್ದಾರೆ.

ವೀರಪ್ಪ ಮೊಯ್ಲಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದರ ಬಗ್ಗೆ ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತೆ. ಖರ್ಗೆ ಅವರು ಯಾರೂ ಮಾತಾಡಬೇಡಿ ಎಂದಿದ್ದಾರೆ. ಹಾಗಾಗಿ ಮಾತಾಡಲ್ಲ. ಸದ್ಯ ಎರಡು ಕುರ್ಚಿಗಳು ಭರ್ತಿ ಇವೆ ಎಂದು ತಿಳಿಸಿದ್ದಾರೆ.

Share This Article