Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಸದ್ಯದಲ್ಲೇ ಕ್ಲಿಯರ್‌: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಸದ್ಯದಲ್ಲೇ ಕ್ಲಿಯರ್‌: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

Bengaluru City

ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಸದ್ಯದಲ್ಲೇ ಕ್ಲಿಯರ್‌: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

Public TV
Last updated: March 7, 2025 5:53 pm
Public TV
Share
2 Min Read
Lakshmi Hebbalkar 1
SHARE

– ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಇಲ್ಲ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದೆಯೋ ಹಾಗೆಯೇ ಮುಂದುವರೆದುಕೊಂಡು ಹೋಗಲಿದೆ. ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅನುದಾನ ಸರಿಯಾಗಿ ಸದ್ಬಳಕೆ
ಕೆಲವೊಂದು ಇಲಾಖೆಗಳಲ್ಲಿ ಕಳೆದ ಬಜೆಟ್‌ನಲ್ಲಿ ನೀಡಿದ ಹಣವೇ ಖರ್ಚಾಗುತ್ತಿಲ್ಲವೆಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌, ನನ್ನ ಇಲಾಖೆ ಇಷ್ಟು ವರ್ಷ ಬೇರೆ ರೀತಿಯಲ್ಲಿ ಇತ್ತು. ಆದರೆ, ಈಗ ಬಹುದೊಡ್ಡ ಗಾತ್ರದ ಬಜೆಟ್‌ನ್ನು ಒಳಗೊಂಡಂತಹ ಇಲಾಖೆಯಾಗಿದೆ. ಅದರಲ್ಲೂ ಗೃಹಲಕ್ಷ್ಮಿ ಯೋಜನೆ ಬಂದಿರುವುದರಿಂದ ಒಂದು ವರ್ಷಕ್ಕೆ ಸುಮಾರು 32 ಸಾವಿರ ಕೋಟಿ ರೂಪಾಯಿಯಷ್ಟು ಹಣವನ್ನು ಗೃಹಲಕ್ಷ್ಮಿಯರಿಗೆ ನೀಡಲಾಗುತ್ತಿದೆ. ನಮ್ಮ ಇಲಾಖೆಗೆ ನೀಡಿದ ಅನುದಾನ ಪೈಕಿ ಯಾವುದೇ ಅನುದಾನ ಉಳಿದಿಲ್ಲ. ಎಲ್ಲವೂ ಸರಿಯಾದ ರೀತಿಯಲ್ಲಿ ಖರ್ಚಾಗಿದೆ. ಶೇ.10 ರಷ್ಟು ಮಾತ್ರ ಅನುದಾನ ಮಿಕ್ಕಿರಬಹುದು. ಅದು ಕೂಡ ಮಾ.31 ರೊಳಗೆ ಖರ್ಚಾಗಲಿದೆ ಎಂದು ಹೇಳಿದರು.

ಸದ್ಯದಲ್ಲೇ ಜನವರಿ, ಫೆಬ್ರವರಿಯದ್ದು ಕ್ಲಿಯರ್‌
ಗೃಹಲಕ್ಷ್ಮಿ ಹಣ ಎರಡ್ಮೂರು ತಿಂಗಳಿಗೊಮ್ಮೆ ಬರುತ್ತದೆ ಎನ್ನುವುದು ತಪ್ಪು. ಸರ್ಕಾರ ಬಹುದೊಡ್ಡ ಯೋಜನೆ ಮಾಡಿದೆ. ನವೆಂಬರ್‌, ಡಿಸೆಂಬರ್‌ ತಿಂಗಳ ಹಣ ಕ್ಲಿಯರ್‌ ಆಗಿದೆ. ಜನವರಿ, ಫೆಬ್ರವರಿ ಸದ್ಯದಲ್ಲೇ ಕ್ಲಿಯರ್‌ ಆಗಲಿದೆ. ಹತ್ತು-ಹದಿನೈದು ದಿನ ಹೆಚ್ಚು ಕಡಿಮೆ ಆಗಬಹುದೇನೋ ವಿನಃ ಯಾವುದೇ ಕಾರಣಕ್ಕೂ ಕ್ಲಿಯರ್‌ ಆಗದೇ ಉಳಿಯುವುದಿಲ್ಲ ಎಂದು ತಿಳಿಸಿದರು.

ಮಹಾರಾಷ್ಟ್ರದಲ್ಲಿ ಯೋಜನೆ ಸ್ತಬ್ಧ
ನಮ್ಮ ನೆರೆಯ ಮಹಾರಾಷ್ಟ್ರ ರಾಜ್ಯವನ್ನು ನೋಡಿ, ಅಲ್ಲಿ ಚುನಾವಣೆಗೆ ಮುನ್ನ ಎರಡು ತಿಂಗಳ ದುಡ್ಡನ್ನು ಹಾಕಿದರು. ಅಲ್ಲಿನ ‘ಮಾಝಿ ಲಡಕಿ ಬಹಿನ್‌’ ಯೋಜನೆಗೆ ಹಣನೇ ಇಲ್ಲ. ಇಲ್ಲಿ ನಮ್ಮನ್ನು ಮಾತ್ರ ಬಿಜೆಪಿಯವರು ದೊಡ್ಡದಾಗಿ ಪ್ರಶ್ನೆ ಮಾಡುತ್ತಾರೆಂದು ಖಾರವಾಗಿ ಹೇಳಿದ ಸಚಿವರು, ನಮ್ಮ ಕರ್ನಾಟಕದಲ್ಲೇ ಗೃಹಲಕ್ಷ್ಮಿ ಹಣ ಸರಿಯಾಗಿ ತಲುಪಿಸುತ್ತಿರುವುದು. ಅದೇ ಮಹಾರಾಷ್ಟ್ರದಲ್ಲಿ ಚುನಾವಣೆಗಿಂತ ಮುಂಚೆ ಅಷ್ಟೇ ಹಾಕಿದ್ದರು. ಆದರೆ, ಚುನಾವಣೆ ನಂತರ ಯೋಜನೆ ಜಾರಿಗೊಳ್ಳದೆ ನಿಂತಿದೆ ಎಂದರು.

ಸಿಎಂ ಅವರಿಗೆ ಅಭಿನಂದನೆ
ಸಿಎಂ ಸಿದ್ದರಾಮಯ್ಯ ಅವರದು ಇದು ಕೊನೆಯ ಬಜೆಟ್‌ ಎಂದೆಲ್ಲ ಬಿಜೆಪಿಯವರು ಹೇಳುತ್ತಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನಂತೂ ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. 16ನೇ ದಾಖಲೆ ಬಜೆಟ್‌ ಮಂಡಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲರನ್ನೂ ಒಳಗೊಂಡ ಸಮಗ್ರವಾದ ಬಜೆಟ್‌ ಮಾಡುತ್ತಿರುವುದು ವಿಶೇಷ ಎಂದು ಸಚಿವರು ಬಣ್ಣಿಸಿದರು.

ಎಲ್ಲವೂ ಹೈಕಮಾಂಡ್‌ ತೀರ್ಮಾನ
ಸದ್ಯದಲ್ಲೇ ಸಂಪುಟ ಪುನರ್‌ ರಚನೆ ಆಗಲಿದೆ. ಇದು ಕೆಲ ಸಚಿವರಿಗೆ ಕೊನೆಯ ಬಜೆಟ್‌ ಎಂದೆಲ್ಲ ಹೇಳುತ್ತಿದ್ದಾರೆಂಬ ಸುದ್ದಿಗಾರರ ಪ್ರಶ್ನೆಗೆ ಸಚಿವರು, ಈ ಒಳ್ಳೆಯ ಸಂದರ್ಭದಲ್ಲಿ ಏನನ್ನೂ ಮಾತನಾಡಲು ಹೋಗುವುದಿಲ್ಲ. ಏಕೆಂದರೆ, ನಮ್ಮ ಕಾಂಗ್ರೆಸ್‌ ಪಕ್ಷದಲ್ಲಿ ಒಂದು ಶಿಸ್ತು ಇದೆ. ಏನೇ ಚರ್ಚೆ, ತೀರ್ಮಾನಗಳಿದ್ದರೂ ಅದನ್ನು ಹೈಕಮಾಂಡ್‌ ಮಾಡುತ್ತದೆ ಎಂದು ಹೇಳಿದರು.

TAGGED:Gruhalakshmi SchemeLakshmi Hebbalkarಗೃಹಲಕ್ಷ್ಮಿ ಯೋಜನೆಲಕ್ಷ್ಮಿ ಹೆಬ್ಬಾಳ್ಕರ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
5 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
5 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
6 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
7 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
7 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?