– ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಸಿಎಂ ರೇಖಾ ಕೊಡ್ತಾರಾ ಗಿಫ್ಟ್?
ನವದೆಹಲಿ: ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day) ಹಿನ್ನೆಲೆಯಲ್ಲಿ ಮಹಿಳೆಯರಿಗೆ ದೆಹಲಿ ಸರ್ಕಾರದಿಂದ ಬಂಪರ್ ಗಿಫ್ಟ್ ನೀಡುವ ಸಾಧ್ಯತೆ ಇದೆ.
ಮಹಿಳೆಯರ ಖಾತೆಗೆ 2,500 ರೂ. ಹಾಕುವ ಬಗ್ಗೆ ಇಂದು ನಿರ್ಧಾರ ಆಗಬಹುದು ಎನ್ನಲಾಗಿದೆ. ಬೆಳಗ್ಗೆ 10 ಗಂಟೆಗೆ ಸಿಎಂ ರೇಖಾ ಗುಪ್ತಾ (Rekha Gupta) ಅವರು ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಕ್ಷೇತ್ರ ಪುನರ್ ವಿಂಗಡಣೆ – ಕೇಂದ್ರದ ಪ್ರಕ್ರಿಯೆ ವಿರುದ್ಧ ಹೋರಾಟಕ್ಕೆ ಕರೆ; ಕರ್ನಾಟಕ ಸೇರಿ 7 ರಾಜ್ಯದ ಸಿಎಂಗಳಿಗೆ ಸ್ಟಾಲಿನ್ ಪತ್ರ
ಸಚಿವ ಸಂಪುಟ ಸಭೆಯಲ್ಲಿ ಮಹಿಳೆರ ಖಾತೆಗೆ ಹಣ ಹಾಕುವ ‘ಮಹಿಳಾ ಸಮೃದ್ಧಿ ಯೋಜನೆ’ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಹೋಳಿ ಹಬ್ಬಕ್ಕೆ ಉಚಿತ ಸಿಲಿಂಡರ್ ನೀಡುವ ಬಗ್ಗೆ ತಿರ್ಮಾನ ಕೈಗೊಳ್ಳಬಹುದು ಎನ್ನಲಾಗಿದೆ.
ಮಧ್ಯಾಹ್ನ 12 ಕ್ಕೆ ಜವಾಹರಲಾಲ್ ನೆಹರೂ ಸ್ಟೇಡಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ. ಮೊದಲ ಸಂಪುಟದಲ್ಲೇ ಮಹಿಳಾ ಸಮೃದ್ಧಿ ಯೋಜನೆಯ ಭರವಸೆಯನ್ನು ಬಿಜೆಪಿ ನೀಡಿತ್ತು. ಇದಲ್ಲದೇ ಹೋಳಿ, ದೀಪಾವಳಿಗೆ ಉಚಿತ ಸಿಲಿಂಡರ್ ಭರವಸೆಯನ್ನೂ ನೀಡಿತ್ತು. ಇದನ್ನೂ ಓದಿ: ಹರಿಯಾಣದಲ್ಲಿ ವಾಯುಪಡೆಯ ಜಾಗ್ವಾರ್ ಫೈಟರ್ ಜೆಟ್ ಪತನ – ಪೈಲಟ್ ಸೇಫ್