ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಿರೋಧ

Public TV
1 Min Read
HD Kumaraswamy 1

– ಹೋಳು ಮಾಡುವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ
– ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ: ಡಿಕೆಶಿಗೆ ಹೆಚ್‌ಡಿಕೆ ಟಾಂಗ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ (Greater Bengaluru Governance Bill) ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

hdk tweet

ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ!! 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ Divide and Rule.

ಅಂದು: ಅಖಂಡ ಭಾರತವನ್ನು ಹೋಳು ಮಾಡಿತು!
ಇಂದು: ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ!!

ದುರುದ್ದೇಶವಿಷ್ಟೇ; ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದು. ಗ್ರೇಟರ್‌ ಬೆಂಗಳೂರು ಹೆಸರಿಗಷ್ಟೇ. ಲೂಟರ್‌ ಉದ್ದೇಶ ಕೊಳ್ಳೆ ಹೊಡೆಯುವುದಷ್ಟೇ. ಅಧಿಕಾರ, ಅಭಿವೃದ್ಧಿ ವಿಕೇಂದ್ರೀಕರಣವಲ್ಲ, ಇದು ಲೂಟಿಯ ವಿಕೇಂದ್ರೀಕರಣ!!

ಲೂಟಿಕೋರರಾದ ಮಹಮ್ಮದ್ ಘಜ್ನಿ, ಮೊಹಮದ್‌ ಘೋರಿ ಸಂಪದ್ಭರಿತ ಭಾರತವನ್ನು ಲೂಟಿಗೈದರು. ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಪರೋಕ್ಷವಾಗಿ ಹೆಚ್‌ಡಿಕೆ ಟಾಂಗ್‌ ಕೊಟ್ಟಿದ್ದಾರೆ.

Share This Article