ರಾಯಚೂರು: ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡಬಾರದು, ಮನೆ, ಕಚೇರಿಯಲ್ಲೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದ್ದಾರೆ.ಇದನ್ನೂ ಓದಿ: ಲಿವ್ ಇನ್‌ನಲ್ಲಿದ್ದಾಗ ಕೊಟ್ಟಿದ್ದ ಹಣ, ಒಡವೆ ಕೊಡು ಎಂದವನಿಗೆ ಥಳಿಸಿ ವಿಷ ಕುಡಿಸಿದ ಮಾಜಿ ಪ್ರೇಯಸಿ!
ರಾಯಚೂರಿನ (Raichuru) ಮಾನ್ವಿಯಲ್ಲಿ (Manvi) ಮಾತನಾಡಿದ ಅವರು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇವೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆಯ ಬಗ್ಗೆ ಸರ್ಕಾರ ಮಟ್ಟದಲ್ಲಿ ತೀರ್ಮಾನ ಮಾಡಿಕೊಳ್ಳಲಿ. ಮಧ್ಯಾಹ್ನ ಹೊತ್ತು ಫೀಲ್ಡ್ ವಿಸಿಟ್ ಮಾಡುವುದನ್ನು ಅಧಿಕಾರಿಗಳು ಬಿಡಬೇಕು. ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12 ರಿಂದ 3ರ ವರೆಗೆ ಮಾಡಬಾರದು. ಬೆಳಗಿನ ಜಾವ ಅಥವಾ ಸಾಯಂಕಾಲ ಮಾಡಬೇಕು. ಸರ್ಕಾರ ರಜೆ ಕೊಡಬೇಕು ಅಂತ ಹೇಳುವುದಿಲ್ಲ, ಸಮಯ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು ಎಂದರು.
ರಾಯಚೂರು ಜಿಲ್ಲೆ ಸೇರಿ ಈ ಭಾಗದಲ್ಲಿ 43 ರಿಂದ 44 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಹೋಗುತ್ತದೆ. ಮಧ್ಯಾಹ್ನ ಸಮಯದಲ್ಲಿ ಮನೆಯೊಳಗೆ ಅಥವಾ ಕಚೇರಿಯೊಳಗೆ ಇರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಶಾಲೆಗಳು, ಎಲ್ಲಾ ಸಂಸ್ಥೆಗಳು ಆ ಬಗ್ಗೆ ಗಮನ ಕೊಡಬೇಕು. ಆಹಾರದ ಬಗ್ಗೆಯೂ ಗಮನ ಕೊಡಬೇಕು. ಆಗಾಗ ನೀರು ಕುಡಿದರೆ ನಿರ್ಜಲೀಕರಣದಿಂದ ದೂರ ಇರಬಹುದು. ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ ಎಂದು ತಿಳಿಸಿದರು.ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ವಕ್ಫ್ ಅಧ್ಯಕ್ಷ ಸ್ಥಾನ ವಿಚಾರದಲ್ಲಿ ಜಟಾಪಟಿ – ಅಧ್ಯಕ್ಷರಾಗಿ ಸೈಯದ್ ಹುಸೈನಿ ಆಯ್ಕೆ