ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸದ್ದಕ್ಕೆ ಇಬ್ಬರು ಪುತ್ರರನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದು ನೇಣಿಗೆ ಶರಣಾದ ತಂದೆ

Public TV
1 Min Read
ಎಐ ಚಿತ್ರ
ಎಐ ಚಿತ್ರ

ಹೈದರಾಬಾದ್‌: ಪರೀಕ್ಷೆಯಲ್ಲಿ (Exam) ಉತ್ತಮ ಅಂಕ ಗಳಿಸದ್ದಕ್ಕೆ ಇಬ್ಬರು ಮಕ್ಕಳನ್ನು ಒಎನ್‌ಜಿಸಿ ಉದ್ಯೋಗಿಯೊಬ್ಬ ಹತ್ಯೆಗೈದ ಘಟನೆ ಆಂಧ್ರಪ್ರದೇಶದ (Andhra Pradesh) ಕಾಕಿನಾಡದಲ್ಲಿ ನಡೆದಿದೆ.

37 ವರ್ಷದ ಒಎನ್‌ಜಿಸಿ ಉದ್ಯೋಗಿ ಚಂದ್ರಶೇಖರ್‌ ಇಬ್ಬರು ಅಪ್ರಾಪ್ತ ಪುತ್ರರನ್ನು ಕೊಂದು ನಂತರ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ತಂದೆ ವಿ. ಚಂದ್ರ ಕಿಶೋರ್ ಇಬ್ಬರು ಬಾಲಕರನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನಟ ಪ್ರಭುದೇವ

 

ಪುತ್ರರ ಶೈಕ್ಷಣಿಕ ಸಾಧನೆಯಿಂದ ಚಂದ್ರಶೇಖರ್‌ ನಿರಾಶೆಗೊಂಡಿದ್ದರು. ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡದಿದ್ದರೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುಂದೆ ಕಷ್ಟವಾಗಲಿದೆ ಎಂದು ಭಾವಿಸಿ ಮಕ್ಕಳನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ವಿಧಿವಿಜ್ಞಾನ ತಂಡ ಮನೆಗೆ ಆಗಮಿಸಿ ಪರಿಶೀಲಿಸಿದೆ. ಈ ಘಟನೆಗೆ ನಿಖರವಾದ ಕಾರಣಗಳನ್ನು ಪತ್ತೆ ಹಚ್ಚಲು  ತನಿಖೆ ಆರಂಭವಾಗಿದೆ.

ಕಿಶೋರ್ ಅವರ ಪತ್ನಿಯ ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪತಿ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ ಮಕ್ಕಳು ಬಕೆಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

 

Share This Article