ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವರು ಭಾಗಿ – ಶರಣಪ್ರಕಾಶ್ ಪಾಟೀಲ್ ಬಾಂಬ್

Public TV
1 Min Read
Sharanprakash Patil

ಕಲಬುರಗಿ: ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ (Ranya Rao Gold Smuggling Case) ರಾಜ್ಯದ ಇಬ್ಬರು ಸಚಿವರು ಭಾಗಿಯಾಗಿದ್ದಾರೆ ಎಂಬುದು ಶುದ್ಧ ಸುಳ್ಳು. ಬಹುಶಃ ಕೇಂದ್ರ ಸಚಿವರು ಭಾಗಿಯಾಗಿರಬಹುದು ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Sharanprakash Patil) ಬಾಂಬ್‌ ಸಿಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರನ್ಯಾ ಭಾಗಿಯಾಗಿರುವ ಪ್ರಕರಣದಲ್ಲಿ ರಾಜ್ಯದ ಸಚಿವರ ಪಾತ್ರ ಹೇಗೆ ಇರಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ವಿಮಾನ ನಿಲ್ದಾಣಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಇರುತ್ತವೆ. ಹಾಗಾಗಿ, ಬಹುಶಃ ತಪ್ಪು ಅಂದಾಜಿನಿಂದ ಹಾಗೆ ಹೇಳಿರಬಹುದು ಎಂದರು.

ranya rao

ವಿಮಾನ ನಿಲ್ದಾಣಗಳಲ್ಲಿ ಶಿಷ್ಟಾಚಾರದ ಜವಾಬ್ದಾರಿ ಕೇಂದ್ರ ಸರ್ಕಾರದ ಅಡಿ ಬರುತ್ತದೆ. ಹೀಗಾಗಿ ನಮ್ಮ ಸರ್ಕಾರದ ಯಾವುದೇ ಸಚಿವರು ಭಾಗಿಯಾಗಿರುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಅನೈತಿಕ ಸಂಬಂಧ ಮುಚ್ಚಿ ಹಾಕಲು ಪುತ್ರ, ಮೈದುನ ಪತ್ನಿಯ ಕೊಲೆ – ತಾಯಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Ranya

ಶೀಘ್ರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ:
ಮುಂದಿನ ಕೆಲವೇ ದಿನಗಳಲ್ಲಿ ಕಲಬುರಗಿ ನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ನೆರವೇರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಐಸಿಸಿ ಅಧ್ಯಕ್ಷರನ್ನು ಆಹ್ವಾನಿಸಲಾಗುವುದು. ಅದಕ್ಕಾಗಿ ಅವರ ಸಮಯ ಕೇಳಲಾಗಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: Mysuru | ನೀರಿನಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ಇನ್ನೂ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಇಬ್ಬರ ಸಾವಿನ ಪ್ರಕರಣ ಕುರಿತು ಪ್ರಸ್ತಾಪಿಸಿದ ಅವರು, ಇದುವರೆಗೆ ಜಿಮ್ಸ್ ನಲ್ಲಿ ಇಂತಹ ಪ್ರಕರಣ ನಡೆದಿಲ್ಲ. ಮಾಧ್ಯಮಗಳ ಮೂಲಕ ತಮಗೆ ಗೊತ್ತಾಗಿದೆ. ಈ ನಿಟ್ಟಿನಲ್ಲಿ ಸಣ್ಣ ತಪ್ಪಾಗಿದ್ದರೂ ಸಹಿಸುವುದಿಲ್ಲ. ಈ ಬಗ್ಗೆ‌ ತನಿಖೆ ನಡೆಸಲಾಗುವುದು ಎಂದು ಖಾತ್ರಿಪಡಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಶುಲ್ಕ – ತಿಂಗಳಿಗೆ ವಸತಿ, ವಾಣಿಜ್ಯ ಕಟ್ಟಡಗಳಿಗೆ ಎಷ್ಟು? 

Share This Article