Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಮಹಿಳಾ ಕಾಂಗ್ರೆಸ್‌ಗೆ ಡಿಕೆಶಿ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಮಹಿಳಾ ಕಾಂಗ್ರೆಸ್‌ಗೆ ಡಿಕೆಶಿ ಕರೆ

Bengaluru City

2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಮಹಿಳಾ ಕಾಂಗ್ರೆಸ್‌ಗೆ ಡಿಕೆಶಿ ಕರೆ

Public TV
Last updated: March 15, 2025 11:09 pm
Public TV
Share
8 Min Read
SHARE

ಬೆಂಗಳೂರು: ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ (Assembly  Election) 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.

ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಮಹಿಳಾ ದಿನಾಚರಣೆ (Women’s Day) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿಮ್ಮೆಲ್ಲರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ನೆಹರೂ ಅವರು ಒಂದು ಮಾತು ಹೇಳಿದ್ದಾರೆ. ಜನರನ್ನು ಜಾಗೃತರನ್ನಾಗಿ ಮಾಡಬೇಕಾದರೆ ಮಹಿಳೆಯರು ಜಾಗೃತರಾಗಿರಬೇಕು. ಆಕೆ ನಡೆದರೆ ಕುಟುಂಬ ನಡೆದಂತೆ, ಕುಟುಂಬ ನಡೆದರೆ ಗ್ರಾಮ ನಡೆದಂತೆ, ಸಮಾಜ ಹಾಗೂ ದೇಶ ನಡೆಯುತ್ತದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ 1.23 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪುತ್ತಿದೆ. 1.50 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆ ನೀಡಲಾಗುತ್ತಿದೆ. ರಾಜ್ಯದ ಎಲ್ಲಾ ಮಹಿಳೆಯರಿಗೂ ಬಸ್‌ನಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದ್ದೇವೆ. ಇನ್ನು ಬಡವರಿಗೆ ನೀಡುವ ಮನೆ ಹಾಗೂ ನಿವೇಶನಗಳನ್ನು ಆ ಕುಟುಂಬದ ಮಹಿಳೆಯರ ಹೆಸರಿನಲ್ಲಿ ಮಾಡಬೇಕು ಎಂದು ಕಡ್ಡಾಯ ನಿಯಮ ಮಾಡಿದ್ದೇವೆ. ನನ್ನ ಕ್ಷೇತ್ರದಲ್ಲಿ ಆಶ್ರಯ 7 ಸಾವಿರ ನಿವೇಶನ ನೀಡಿದ್ದೆ. ಎಲ್ಲವನ್ನು ಮಹಿಳೆಯರ ಹೆಸರಿಗೆ ನಿವೇಶನ ಹಂಚಿದೆ. ಆದಾದ ನಂತರದ ಚುನಾವಣೆಯಲ್ಲಿ ಜನ ನನ್ನನ್ನು 30 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿದರು ಎಂದು ತಿಳಿಸಿದರು. ಇದನ್ನೂ ಓದಿ: ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವರು ಭಾಗಿ – ಶರಣಪ್ರಕಾಶ್ ಪಾಟೀಲ್ ಬಾಂಬ್

DK Shivakumar Womens day

18 ಕ್ಷೇತ್ರಗಳ ಉಪಚುನಾವಣೆಯಲ್ಲಿ 15ರಲ್ಲಿ ಸೋತು ಪಕ್ಷ ಕಷ್ಟದ ಪರಿಸ್ಥಿತಿಯಲ್ಲಿತ್ತು. ಮಾರ್ಚ್ 11ರಂದು ನಾನು ಅಧ್ಯಕ್ಷನಾಗಿ ನೇಮಕಗೊಂಡು 5 ವರ್ಷವಾಗಿದೆ. ನಾನು ಇಲ್ಲಿ ಅಧಿಕಾರ ಸ್ವೀಕರಿಸಿದ ದಿನ ‘ನನಗೆ ಭವಿಷ್ಯ ಕಾಣಬೇಕಾದರೆ ಮಹಿಳೆ ಹಾಗೂ ಯುವಕರಿಂದ ಮಾತ್ರ ಸಾಧ್ಯ’ ಎಂದು ಹೇಳಿದ್ದೆ. ಅದರಂತೆ ನಾವು ಚುನಾವಣೆ ಪ್ರಣಾಳಿಕೆ ಮಾಡುವಾಗ ಯುವಕರು ಹಾಗೂ ಮಹಿಳೆಯರಿಗೆ ಆದ್ಯತೆ ನೀಡಿದೆವು. ನಮ್ಮ ಈ ಯೋಜನೆಗಳು ಜಾರಿ ಸಾಧ್ಯವೇ? ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಹಾಗೂ ದೇಶ ದಿವಾಳಿಯಾಗಲಿದೆ ಎಂದು ಪ್ರಧಾನಮಂತ್ರಿಯಾದಿಯಾಗಿ ಬಿಜೆಪಿ ನಾಯಕರು ಟೀಕೆ ಮಾಡಿದರು. ಆದರೆ ಈಗ ನಮ್ಮ ಮಾದರಿ ಅನುಸರಿಸಿ ಬಿಜೆಪಿ ರಾಜ್ಯಗಳು ಗ್ಯಾರಂಟಿ ಯೋಜನೆ ನೀಡುತ್ತಿವೆ. ನಾವು ಕಾರ್ಯಕರ್ತರಿಗಾಗಿ ಗ್ಯಾರಂಟಿ ಸಮಿತಿ ರಚಿಸಿದ್ದೇವೆ. ಇದರ ವಿರುದ್ಧ ಅಧಿವೇಶನದಲ್ಲಿ ವಿರೋಧ ಪಕ್ಷದವರು ನಮ್ಮ ಮೇಲೆ ವಾಗ್ದಾಳಿಗೆ ಮುಂದಾಗಿದ್ದಾರೆ. ಶಾಸಕರ ಹಕ್ಕು ಕಸಿಯುತ್ತಿದ್ದೀರಿ ಎಂದು ತಿಳಿಸಿದರು. ಕಾರ್ಯಕರ್ತರು ಅಧಿಕಾರಕ್ಕೆ ತಂದಿದ್ದಾರೆ. ಅದಕ್ಕಾಗಿ ಮಾಡಿದ್ದೇವೆ. ಅಧಿಕಾರಕ್ಕೆ ತರದಿದ್ದರೆ ನಾವು ಮಾಡಲು ಸಾಧ್ಯವಾಗುತ್ತಿರಲಿಲ್ಲ. ನಾವು ಯಾರ ಹಕ್ಕನ್ನು ಕಸಿಯುತ್ತಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಫಲಾನುಭವಿಗಳಿಗೆ ಈ ಯೋಜನೆಗಳು ಸರಿಯಾಗಿ ತಲುಪುತ್ತಿವೆಯೇ ಇಲ್ಲವೇ ಎಂದು ಪರಿಶೀಲನೆಗೆ ಈ ಸಮಿತಿ ಮಾಡಿದ್ದೇವೆ. ತಾಲುಕು ಮಟ್ಟದಲ್ಲಿ ಕಚೇರಿ ನೀಡಿ ಅವರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಇದನ್ನು ಸಹಿಸಲು ಅವರಿಂದ ಸಾಧ್ಯವಾಗುತ್ತಿಲ್ಲ. ನಾನು ಇತ್ತೀಚೆಗೆ ಉಡುಪಿಗೆ ಹೋಗಿದ್ದಾಗ ಅಲ್ಲಿನ ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳಿಗೆ ವಿರೋಧ ಮಾಡುತ್ತಿದ್ದರಂತೆ. ಅದಕ್ಕೆ ನಾನು ಅವರಿಗೆ ಒಂದು ಸವಾಲಾಕಿದೆ. ನಿಮ್ಮ ಪಕ್ಷದ ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳನ್ನು ತ್ಯಜಿಸಿರಿ ಎಂದು ಕರೆ ಕೊಡುವಂತೆ ಹೇಳಿದೆ. ಇದನ್ನು ಮಾಡಲು ಅವರಿಂದ ಸಾಧ್ಯವೇ? ಅವರ ಬೆಂಬಲಿಗರೇ ಅವರಿಗೆ ಛೀಮಾರಿ ಹಾಕುತ್ತಾರೆ ಎಂದರು. ಇದನ್ನೂ ಓದಿ: 4% ಮೀಸಲಾತಿ ಮುಸ್ಲಿಮರಿಗೆ ಮಾತ್ರವಲ್ಲ – ಡಿ.ಕೆ ಶಿವಕುಮಾರ್‌

ನಮ್ಮ ಭಾಷೆಯನ್ನು ಮಾತೃಭಾಷೆ ಎಂದು ಕರೆಯುತ್ತೇವೆ. ನಮ್ಮ ನಾಡಿನ ದೇವತೆ ಚಾಮುಂಡೇಶ್ವರಿ, ಭುವನೇಶ್ವರಿ. ಹಳ್ಳಿಗಳಿಗೆ ಹೋದರೆ ಗ್ರಾಮ ದೇವತೆ ಕೇಳುತ್ತೇವೆ. ಭೂಮಿಯನ್ನು ಭೂತಾಯಿ ಎಂದು ಪರಿಗಣಿಸುತ್ತೇವೆ. ಯಾವುದೇ ಶುಭ ಕಾರ್ಯಕ್ರಮದಲ್ಲಿ ಆಹ್ವಾನ ನೀಡಬೇಕಾದರೆ ಮೊದಲು ಶ್ರೀಮತಿ ನಂತರ ಶ್ರೀ ಎಂದು ನಮೂದಿಸುತ್ತೇವೆ. ಹೀಗೆ ಪ್ರತಿ ಹಂತದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. ನೀವೆಲ್ಲರೂ ನಾಯಕಿಯರು ಎಂದು ತಿಳಿಸಿದರು. ಮಹಿಳೆಯರಿಗಾಗಿ ನಮ್ಮ ಪಕ್ಷ ಇಷ್ಟು ಕಾರ್ಯಕ್ರಮ ನೀಡಿದೆ. ಈಗ ನೀವೆಲ್ಲರೂ ಸೇರಿ ನಮ್ಮ ಪಕ್ಷಕ್ಕೆ ಏನು ಮಾಡುತ್ತೀರಿ ಎಂದು ಅಧ್ಯಕ್ಷನಾಗಿ ಕೇಳುತ್ತೇನೆ. ನೀವು ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ಪಕ್ಷಕ್ಕೆ ಏನು ಕೊಡುಗೆ ನೀಡುತ್ತೀರಿ ಎಂಬುದು ಮುಖ್ಯ. ಸೌಮ್ಯ ರೆಡ್ಡಿ ಸೇರಿದಂತೆ ನಾನು ಎಲ್ಲರಿಗೂ ಹೇಳುವುದು ಒಂದೇ. ರಾಣಿ ಸತೀಶ್ ಅವರ ಕಾಲದಿಂದ ಇಲ್ಲಿಯವರೆಗೂ ಮಹಿಳಾ ಕಾಂಗ್ರೆಸ್ ಬಗ್ಗೆ ನನಗೆ ತೃಪ್ತಿ ಇಲ್ಲ. ನೀವು ನಿಮ್ಮ ಒತ್ತಡಗಳ ಮಧ್ಯೆ ಪಕ್ಷ ಸಂಘಟನೆಗೆ ನನ್ನ ನಿರೀಕ್ಷೆ ಮಟ್ಟದಲ್ಲಿ ಕೆಲಸ ಮಾಡಲು ಆಗಿಲ್ಲ. ಇದಕ್ಕಾಗಿ ನನಗೆ ಬೇಸರವಿಲ್ಲ. ಇಂದು ಕೂಡ ಅವಕಾಶಗಳು ನಿಮ್ಮ ಮನೆ ಬಾಗಿಲ ಮುಂದಿದೆ. ಪ್ರತಿ ಗೃಹಲಕ್ಷ್ಮಿ ಫಲಾನುಭವಿಗಳಿಂದ 50 ಜನ ಕಾಂಗ್ರೆಸ್ ಸದಸ್ಯರನ್ನಾಗಿ ಮಾಡಿಸಿ ಸಾಕು. ಪ್ರತಿ ವಿಧಾನಸಭೆಯಲ್ಲಿ ಕ್ಷೇತ್ರ ಅಥವಾ ತಾಲೂಕು ಮಟ್ಟದಲ್ಲಿ ಯಾರು ಅತಿ ಹೆಚ್ಚು ಮಹಿಳೆಯರನ್ನು ಪಕ್ಷದ ಸದಸ್ಯೆಯರನ್ನಾಗಿ ಮಾಡುತ್ತೀರೋ ಅವರಿಗೆ ತಾಲೂಕು ಮಟ್ಟದಲ್ಲಾದರೂ ನಿರ್ದೇಶಕ ಹುದ್ದೆ ನೀಡಲಾಗುವುದು. ಇದು ನನ್ನ ವಾಗ್ದಾನ, ಬದ್ಧತೆ. ಕರಾವಳಿ ಭಾಗದಲ್ಲಿ ನಮ್ಮ ಶಾಸಕರು ಹೆಚ್ಚಾಗಿ ಗೆದ್ದಿಲ್ಲ. ಅಲ್ಲಿನ ಮಹಿಳೆಯರು ಈ ಯೋಜನೆಗಳ ಫಲಾನುಭವಿಗಳಾಗಿಲ್ಲವೇ? ನೀವು ಅವರ ಬಳಿ ಹೋಗಿ, ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳ ಬಗ್ಗೆ ವಿವರವಾಗಿ ಚರ್ಚೆ ಮಾಡಿ. ಈ ಪಕ್ಷವನ್ನು ಉಳಿಸಿಕೊಳ್ಳಿ ಎಂದು ಪಕ್ಷದ ಸದಸ್ಯತ್ವ ಅಭಿಯಾನ ಮಾಡಿ ಎಂದು ಸೂಚಿಸಿದರು. ಇದನ್ನೂ ಓದಿ: ಅನೈತಿಕ ಸಂಬಂಧ ಮುಚ್ಚಿ ಹಾಕಲು ಪುತ್ರ, ಮೈದುನ ಪತ್ನಿಯ ಕೊಲೆ – ತಾಯಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ರಾಜಕೀಯದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎಂದು ಕಾಂಗ್ರೆಸ್ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿತ್ತು. ರಾಜ್ಯಸಭೆಯಲ್ಲಿ ಸಂಖ್ಯಾಬಲದ ಕೊರತೆಯಿಂದ ಸಾಧ್ಯವಾಗಲಿಲ್ಲ. ಈಗ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಪ್ರಣಾಳಿಕೆಯಲ್ಲಿ ಈ ವಿಚಾರ ಪ್ರಸ್ತಾಪಿಸಿವೆ. ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ 224 ಕ್ಷೇತ್ರಗಳ ಪೈಕಿ 74 ಮಹಿಳಾ ಅಭ್ಯರ್ಥಿಗಳು ಬೇಕಾಗುತ್ತಾರೆ. ಈಗ ನಾವು 10-12 ಅಭ್ಯರ್ಥಿಗೆ ಟಿಕೆಟ್ ನೀಡುತ್ತಿದ್ದೇವೆ. ಈ 74 ಅಭ್ಯರ್ಥಿಗಳನ್ನು ಯಾರು ತಯಾರು ಮಾಡಬೇಕು? ನನಗೆ ನನ್ನ ಮಗಳು, ಪತ್ನಿಯನ್ನು ಅಭ್ಯರ್ಥಿ ಮಾಡುವುದು ಮುಖ್ಯವಲ್ಲ. ನಿಮ್ಮಂತಹ ಕಾರ್ಯಕರ್ತರು, ಜನಸಾಮಾನ್ಯರು ಪಕ್ಷದ ಅಭ್ಯರ್ಥಿಯಾಗುವ ಮಟ್ಟಕ್ಕೆ ಬೆಳೆಯಬೇಕು. ಆಗ ಮಾತ್ರ ನಾವು ನಿಮಗೆ ಶಕ್ತಿ ನೀಡಿದಂತಾಗುತ್ತದೆ ಎಂದರು. ಇದನ್ನೂ ಓದಿ: ಸ್ಕೂಟರ್‌ಗೆ ಬೊಲೆರೊ ಡಿಕ್ಕಿ – ಮಕ್ಕಳ ಎದುರೇ ಹೋಯ್ತು ಹೆತ್ತಮ್ಮನ ಉಸಿರು..!

DK Shivakumar Womens day

ಒಂದೇ ದಿನದಲ್ಲಿ ಗಿಡ ಮರವಾಗಿ ಬೆಳೆದು ಹಣ್ಣು ಬಿಡುವುದಿಲ್ಲ. ಇದಕ್ಕೆ ಕಾಲಾವಕಾಶ ಬೇಕು. ಇದಕ್ಕಾಗಿ ನಾನು ‘ನಾ ನಾಯಕಿ’ ಕಾರ್ಯಕ್ರಮ ಮಾಡಿದೆ. ಈ ನಾ ನಾಯಕಿ ಕಾರ್ಯಕ್ರಮಕ್ಕೆ ನೀವೆಲ್ಲರೂ ಹೊಸ ರೂಪ ನೀಡಬೇಕು. ಇಂದು ಮಹಿಳಾ ದಿನಾಚರಣೆ ಆಚರಿಸುತ್ತಿದ್ದೀರಿ. ಈ ಹಬ್ಬದಲ್ಲಿ ಸ್ವಯಂಪ್ರೇರಿತರಾಗಿ ಮಹಿಳೆಯರನ್ನು ಕರೆ ತರಬೇಕು. ಕಾಂಗ್ರೆಸಿಗರ ಪಾಲಿಗೆ ಪಕ್ಷದ ಕಚೇರಿ ದೇವಾಲಯವಿದ್ದಂತೆ. ಇಲ್ಲಿಗೆ ಜನರನ್ನು ಕರೆತರಬೇಕು. ನೀವು ವೇಗವಾಗಿ ಸಾಗಬೇಕಾದರೆ ಒಬ್ಬರೇ ಸಾಗಿ, ನೀವು ದೂರ ಕ್ರಮಿಸಬೇಕಾದರೆ ಒಟ್ಟಾಗಿ ಸಾಗಿ ಎಂದು ನಾನು ಹೇಳುತ್ತಿರುತ್ತೇನೆ. ನಾನು ಒಬ್ಬನೇ ಪಾದಯಾತ್ರೆ ಮಾಡಲು ಸಾಧ್ಯವೇ? ಹತ್ತಾರು ಜನ ಸೇರಿದ್ದಕ್ಕೆ ಅಲ್ಲವೇ ದೂರದ ಪಾದಯಾತ್ರೆ ಮಾಡಲು ಸಾಧ್ಯವಾಗಿದ್ದು. ಅವರು ಬಂದರೆ ನಮ್ಮ ಸ್ಥಾನ ಏನಾಗುತ್ತದೆಯೋ ಎಂಬ ಅಳುಕು ಬೇಡ. ನಿಮ್ಮ ಹಣೆಬರಹವನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಲ್ಲಿ ಶ್ರಮವಿದೆಯೋ ಅಲ್ಲಿ ಫಲವಿದೆ. ಎಲ್ಲಿ ಭಕ್ತಿ ಇರುತ್ತದೆಯೋ ಅಲ್ಲಿ ಭಗವಂತ ಇರುತ್ತಾನೆ. ಎಲ್ಲಿ ಮನಸ್ಸಿದೆಯೋ ಅಲ್ಲಿ ಮಾರ್ಗ ಇರುತ್ತದೆ. ಶ್ರಮಪಟ್ಟು ಸಂಘಟನೆ ಮಾಡಿ ಎಂದು ಸಲಹೆ ಕೊಟ್ಟರು. ಇದನ್ನೂ ಓದಿ: Mysuru | ನೀರಿನಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ನಮ್ಮ ಸಮಾಜ ಸೇವೆ ಮಾಡುವವರನ್ನು ಸ್ಮರಿಸುತ್ತದೆ. ನಮ್ಮಲ್ಲಿ ರಾಮನ ತಂದೆ ದಶರಥ ಮಹರಾಜನಿಗಿಂತ, ರಾಮನ ಭಂಟ ಹನುಮಂತನ ದೇವಾಲಯಗಳು ಹೆಚ್ಚಾಗಿವೆ. ಮಹಿಳೆ ಎಂದರೆ ತ್ಯಾಗ. ತ್ಯಾಗದ ಮನೋಭಾವದಲ್ಲಿ ನೀವು ಶ್ರಮಿಸಿ. ಇದಕ್ಕೆ ಸೂಕ್ತ ಉದಾಹರಣೆ ನಮ್ಮ ನಾಯಕಿ ಸೋನಿಯಾ ಗಾಂಧಿ. ಅವರು ದೇಶಕ್ಕಾಗಿ ತನ್ನ ಪತಿ, ಅತ್ತೆಯನ್ನು ಕಳೆದುಕೊಂಡರು. ಪಕ್ಷ ಮುಳುಗಿಹೋಗುತ್ತಿದೆ ಎಂಬ ಸಂದರ್ಭದಲ್ಲಿ ನಾವು ಬಲವಂತವಾಗಿ ಅವರಿಗೆ ಪಕ್ಷದ ಜವಾಬ್ದಾರಿ ನೀಡಿದೆವು. ಸಂಕಷ್ಟದ ಸಮಯದಲ್ಲಿ ಪಕ್ಷದ ಜವಾಬ್ದಾರಿ ವಹಿಸಿಕೊಂಡರು. ಕೊನೆಗೆ ದೇಶದ ಪ್ರಧಾನಮಂತ್ರಿ ಹುದ್ದೆ ಅಲಂಕರಿಸುವ ಸಂದರ್ಭದಲ್ಲಿ ತ್ಯಾಗ ಮಾಡಿದರು. ರಾಜೀವ್ ಗಾಂಧಿ ಅವರು ಸತ್ತಾಗಲೂ ತ್ಯಾಗ ಮಾಡಿ ನರಸಿಂಹರಾವ್ ಅವರನ್ನು ಪ್ರಧಾನಿ ಮಾಡಿದರು. ನಂತರ ಯುಪಿಎ ಸರ್ಕಾರದ ಅವಧಿಯಲ್ಲಿ ಬಿಜೆಪಿ ನಾಯಕಿಯರಾದ ಉಮಾ ಭಾರತಿ, ಸುಷ್ಮಾ ಸ್ವರಾಜ್ ಅವರು ತಲೆ ಬೋಳಿಸಿಕೊಳ್ಳುತ್ತೇವೆ ಎಂದು ಸವಾಲು ಹಾಕಿದಾಗ, ಈ ದೇಶಕ್ಕೆ ಆರ್ಥಿಕ ತಜ್ಞರ ಅಗತ್ಯವಿದೆ ಎಂದು ಮನಮೋಹನ್ ಸಿಂಗ್ ಅವರಿಗೆ ತಮ್ಮ ಬಳಿಗೆ ಬಂದ ಹುದ್ದೆಯನ್ನು ತ್ಯಾಗ ಮಾಡಿದರು. ನಾವು ಒಂದು ಪಂಚಾಯ್ತಿ ಅಧ್ಯಕ್ಷ ಸ್ಥಾನ ಬಿಡುತ್ತೇವಾ? ಎಂದು ತಿಳಿಸಿದರು. ಇಂದು ಕೂಡ ನಿಮ್ಮ ಮುಂದೆ ಅವಕಾಶಗಳಿವೆ. ನೀವು ನಿಮ್ಮ ಆಲೋಚನೆಗಳನ್ನು ಪಕ್ಕಕ್ಕಿಟ್ಟು ದೂರದೃಷ್ಟಿಯಿಂದ ಆಲೋಚಿಸಿ. ನೀವು ಹೊಸ ಪೀಳಿಗೆ ತಯಾರು ಮಾಡದಿದ್ದರೆ ನಮಗೆ ಬಹಳ ತೊಂದರೆಯಾಗಲಿದೆ. ಬರುವವರೆಲ್ಲಾ ಒಂದೇ ಬಾರಿಗೆ ಶಾಸಕರು, ಸಂಸದರಾಗಲು ಮುಂದಾಗುತ್ತಾರೆ. ಸೌಮ್ಯ ಅವರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಬೇಕು ಎಂದು ಬಯಸಿರಲಿಲ್ಲ. ನಾನೇ ಆಕೆಗೆ ಈ ಜವಾಬ್ದಾರಿ ನೀಡಿದ್ದೇನೆ. ಇದಕ್ಕೆ ಅನೇಕರು ಟೀಕೆ ಮಾಡಿದರು. ಟೀಕೆ ಮಾಡುವವರು ಮಾಡಿಕೊಳ್ಳಲಿ. ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಹುಟ್ಟಿದ ಕರುಗಳೆಲ್ಲಾ ಬಸವ ಆಗಲು ಸಾಧ್ಯವಿಲ್ಲ. ಶಿಲಾಯೋಗಂ, ನರಾಯೋಗಂ ಎಂಬ ಶ್ಲೋಕವಿದೆ. ಅಂದರೆ ಶಿಲೆಗೆ ಒಂದು ಕಾಲ, ಮನುಷ್ಯನಿಗೆ ಒಂದು ಕಾಲ ಎಂದರ್ಥ. ನೀವು ಮಹಿಳಾ ಶಿಲ್ಪಿಗಳು. ನಿಮ್ಮಲ್ಲಿ ನಾಯಕತ್ವ ಗುಣವಿದೆ. ಹತ್ತಾರು ಮಹಿಳಾ ನಾಯಕಿಯರನ್ನು ಹುಟ್ಟುಹಾಕಿ. ನಿಮ್ಮ ಸೀಟಿಗೆ ಏನು ಆಗುವುದಿಲ್ಲ ಎಂದು ನುಡಿದರು. ಇದನ್ನೂ ಓದಿ: ಜಮೀರ್ ಕಣ್ಣೀರು ಮತ್ತು 100 ಬಿರಿಯಾನಿ..!

ಇದೇ ಮೇ 20ರಂದು ಸರ್ಕಾರದ ಎರಡು ವರ್ಷಗಳ ಸಂಭ್ರಮಾಚರಣೆ ನಡೆಯಲಿದ್ದು, ರಾಜ್ಯದೆಲ್ಲೆಡೆ ಇದನ್ನು ಹಬ್ಬದಂತೆ ಸಂಭ್ರಮಾಚರಣೆ ಮಾಡಬೇಕು. ಎಲ್ಲಾ ಗ್ರಾಮಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಮನೆ ಮುಂದೆ ರಂಗೋಲಿ ಸ್ಪರ್ಧೆ ನಡೆಸಬೇಕು. ಅತ್ಯುತ್ತಮವಾಗಿ ರಂಗೋಲಿ ಹಾಕಿದವರಿಗೆ ಬಹುಮಾನ ನೀಡಲಾಗುವುದು. ಸರ್ಕಾರದ ವಿರುದ್ಧ ಯಾರು ಎಷ್ಟಾದರೂ ಧಿಕ್ಕಾರ ಕೂಗಲಿ, ಕುಣಿಯಲಿ ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಹಣಕಾಸಿನ ವಿಚಾರ ಚರ್ಚೆ ಮಾಡುತ್ತೇನೆ. ಪಕ್ಷವೇ ನಮಗೆ ತಂದೆ ತಾಯಿ, ಪಕ್ಷವೇ ನಮಗೆ ಬಂಧು ಬಳಗ. ಪಕ್ಷ ಅಧಿಕಾರಕ್ಕೆ ಬಂದಾಗ ನಾವು ನೀವು ಅಧಿಕಾರಕ್ಕೆ ಬರಲು ಸಾಧ್ಯ. ಪಕ್ಷವಿಲ್ಲದಿದ್ದರೆ ನಮಗಾರಿಗೂ ಅಧಿಕಾರ ಇರುವುದಿಲ್ಲ. ಇದಕ್ಕಾಗಿಯೇ ನಾನು ವ್ಯಕ್ತಿ ಪೂಜೆ ಬಿಡಿ, ಪಕ್ಷ ಪೂಜೆ ಮಾಡಿ ಎಂದು ಹೇಳುತ್ತಲೇ ಇರುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಶುಲ್ಕ – ತಿಂಗಳಿಗೆ ವಸತಿ, ವಾಣಿಜ್ಯ ಕಟ್ಟಡಗಳಿಗೆ ಎಷ್ಟು?

ಕಾರ್ಯಕ್ರಮಕ್ಕೂ ಮುನ್ನ ಸೊಬಗು ಸಾಮಾಜಿಕ ಸಂಸ್ಥೆ ವತಿಯಿಂದ ‘ಮಹಿಳಾ ಸಮಾನತೆ ಮತ್ತು ಸಮತೆ ಕಡೆಗೆ ನಾವು ನೀವು’ ಎಂಬ ಮಹಿಳಾ ಜಾಗೃತಿ ನಾಟಕ ಪ್ರದರ್ಶಿಸಲಾಯಿತು. ಇದನ್ನೂ ಓದಿ: ನನ್ನ ಕಪಾಳಕ್ಕೆ 10-15 ಬಾರಿ ಹೊಡೆದಿದ್ದಾರೆ – ನಾನು ಅಮಾಯಕಿ ಎಂದ ರನ್ಯಾ

TAGGED:assembly electionbengalurucongressDK Shivakumarಕಾಂಗ್ರೆಸ್ಡಿಕೆ ಶಿವಕುಮಾರ್ಬೆಂಗಳೂರುವಿಧಾನಸಭೆ ಚುನಾವಣೆ
Share This Article
Facebook Whatsapp Whatsapp Telegram

Cinema news

BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows

You Might Also Like

budget 2026 tax
Latest

Budget 2026 income tax expectations: ಹೊಸ ತೆರಿಗೆ ಪದ್ಧತಿ ಮತ್ತಷ್ಟು ಲಾಭದಾಯಕವಾಗುತ್ತಾ?

Public TV
By Public TV
2 hours ago
RCB Women vs Gujarat Giants Women won by 61 runs RCB QUALIFY FOR THE PLAYOFFS
Cricket

ಗುಜರಾತ್‌ ವಿರುದ್ಧ 61 ರನ್‌ಗಳ ಭರ್ಜರಿ ಜಯ – ಪ್ಲೇ ಆಫ್‌ ಪ್ರವೇಶಿಸಿದ ಆರ್‌ಸಿಬಿ

Public TV
By Public TV
3 hours ago
Nitin Nabin
Latest

ಹೊಸ ತಲೆಮಾರಿನತ್ತ ಹೆಜ್ಜೆ ಹಾಕಿದ ಬಿಜೆಪಿ – 45 ವರ್ಷಕ್ಕೆ ನಿತಿನ್ ನಬಿನ್‌ಗೆ ಅಧ್ಯಕ್ಷ ಪಟ್ಟ

Public TV
By Public TV
4 hours ago
DGP Ramachandra Rao
Karnataka

ರಾಸಲೀಲೆ ವಿಡಿಯೋ ವೈರಲ್ – ರಾಮಚಂದ್ರ ರಾವ್‌ಗೆ 10 ದಿನಗಳ ಕಡ್ಡಾಯ ರಜೆ

Public TV
By Public TV
5 hours ago
SSLC Exams
Bengaluru City

SSLC ಪ್ರಶ್ನೆಪತ್ರಿಕೆಗೆ ಸಿಗುತ್ತಾ ಆಯ್ಕೆ?

Public TV
By Public TV
6 hours ago
UAE President Zayed Al Nahyan and PM Narendra Modi
Latest

ಜಸ್ಟ್‌ 2 ಗಂಟೆಗಳ ಭೇಟಿ – ಭಾರತಕ್ಕೆ ಯುಎಇ ಅಧ್ಯಕ್ಷರು ಬಂದಿದ್ದು ಯಾಕೆ?

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?